Esther 5:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅಷ್ಟೇ ಅಲ್ಲ” ಹಾಮಾನನು ಮುಂದುವರಿಸುತ್ತಾ, “ಎಸ್ತೇರ್ ರಾಣಿಯು ಅರಸನೊಡನೆ ನನ್ನೊಬ್ಬನನ್ನೇ ಕರೆದು ಔತಣ ಮಾಡಿಸಿದಳು. ನಾಳೆಯ ಔತಣ ಸಮಾರಂಭಕ್ಕೂ ಅರಸನೊಡನೆ ನನ್ನನ್ನು ತಿರಿಗಿ ಬರಲು ಆಮಂತ್ರಿಸಿರುತ್ತಾಳೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದಲ್ಲದೆ ಎಸ್ತೇರ್ ರಾಣಿಯು ತಾನು ಸಿದ್ಧಮಾಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ನನ್ನ ಹೊರತಾಗಿ ಇನ್ನಾರನ್ನೂ ಆಹ್ವಾನಿಸಲಿಲ್ಲ. ನಾಳೆಯೂ ಅರಸನ ಜೊತೆಯಲ್ಲಿ ಬರಬೇಕೆಂದು ನನಗೆ ಹೇಳಿದ್ದಾಳೆ.
Kannada BSI Bible 2016
ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಹ! ಎಸ್ತೇರ್ ರಾಣಿಯು ತಾನು ಸಿದ್ಧಮಾಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ನನ್ನನ್ನು ಹೊರತಾಗಿ ಇನ್ನಾರನ್ನೂ ಕರಿಸಲಿಲ್ಲ. ನಾಳೆಯೂ ಅರಸನ ಜೊತೆಯಲ್ಲಿ ಬರಬೇಕೆಂದು ನನಗೆ ಹೇಳಿದ್ದಾಳೆ.
Kannada Bible (KNCL) BSI 2016
ಇದಲ್ಲದೆ, ಎಸ್ತೇರ್‍ರಾಣಿಯೇ ಸ್ವತಃ ಏರ್ಪಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ತನ್ನನ್ನಲ್ಲದೆ ಬೇರಾರನ್ನು ಕರೆದಿಲ್ಲವೆಂತಲೂ ಮರುದಿನವೂ ಅರಸನೊಟ್ಟಿಗೆ ಔತಣ ಮಾಡಲು ತನ್ನನ್ನು ಆಹ್ವಾನಿಸಿರುವಳೆಂದೂ ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಹಾಮಾನನು, “ಎಸ್ತೇರ್ ರಾಣಿಯು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೆ ಯಾರನ್ನು ಕರೆಯಲಿಲ್ಲ. ಮರುದಿನವೂ ಅರಸನೊಂದಿಗೆ ಔತಣಮಾಡಲು ನನ್ನನ್ನು ಆಹ್ವಾನಿಸಿದ್ದಾಳೆ.