Esther 5:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾನು ಹೆಬ್ಬಾಗಿಲ ಬಳಿಯಲ್ಲಿ ಕುಳಿತುಕೊಳ್ಳುತ್ತಿರುವ ಮೊರ್ದೆಕೈಯನ್ನು ನೋಡುವಾಗ ನನ್ನ ಸಂತೋಷವೆಲ್ಲವೂ ಮಾಯವಾಗುತ್ತದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಮೊರ್ದೆಕೈ ಎಂಬ ಯೆಹೂದ್ಯನು ಅರಮನೆಯ ಬಾಗಿಲಿನಲ್ಲಿ ನನ್ನ ಕಣ್ಣ ಮುಂದೆ ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಅಂದನು.
Kannada BSI Bible 2016
ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು.ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಮೊರ್ದೆಕೈ ಎಂಬ ಯೆಹೂದ್ಯನು ಅರಮನೆಯ ಬಾಗಲಿನಲ್ಲಿ ನನ್ನ ಕಣ್ಣು ಮುಂದೆ ಕೂತಿರುವವರೆಗೂ ಇದೆಲ್ಲದರಿಂದಲೂ ನನಗೆ ತೃಪ್ತಿಯಾಗುವದಿಲ್ಲ ಅಂದನು.
Kannada Bible (KNCL) BSI 2016
ಆದರೂ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಿಲಿನಲ್ಲಿ ತನ್ನ ಕಣ್ಣೆದುರು ಕುಳಿತಿರುವವರೆಗೂ ತನಗೆ ಯಾವ ಪ್ರಯೋಜನವೂ ಇಲ್ಲವೆಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೂದ್ಯನಾದ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ನನ್ನ ಕಣ್ಣೆದುರು ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಎಂದನು.