Esther 5:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಸನು ಒಳಾಂಗಣದಲ್ಲಿ ನಿಂತಿದ್ದ ಎಸ್ತೇರಳನ್ನು ಕಂಡ ಕೂಡಲೇ ಆಕೆಯನ್ನು ಮೆಚ್ಚಿಕೊಂಡು ತನ್ನ ಕೈಯಲ್ಲಿದ್ದ ರಾಜದಂಡವನ್ನು ಆಕೆಯ ಕಡೆಗೆ ಚಾಚಿದನು. ಆಗ ಎಸ್ತೇರಳು ಒಳಾಂಗಣವನ್ನು ಪ್ರವೇಶಿಸಿ ರಾಜನ ಬಳಿ ಹೋದಳು ಮತ್ತು ರಾಜದಂಡದ ತುದಿಯನ್ನು ತನ್ನ ಬೆರಳಿನಿಂದ ಮುಟ್ಟಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ ಆಕೆಯ ಮೇಲೆ ದಯವಿಟ್ಟು ತನ್ನ ಕೈಯಲ್ಲಿದ್ದ ಸುವರ್ಣದಂಡವನ್ನು ಆಕೆಯ ಕಡೆಗೆ ಚಾಚಿದನು.
Kannada BSI Bible 2016
ಅರಸನು ಅಂಗಳದಲ್ಲಿ ನಿಂತಿರುವ ರಾಣಿಯಾದ ಎಸ್ತೇರಳನ್ನು ಕಂಡಾಗ ಆಕೆಯು ಅವನ ಸಮ್ಮುಖದಲ್ಲಿ ದಯೆಹೊಂದಿದ್ದರಿಂದ ಅರಸನು ತನ್ನ ಕೈಯಲ್ಲಿದ್ದ ಬಂಗಾರದ ಮುದ್ರೆ ಕೋಲನ್ನು ಎಸ್ತೇರಳ ಬಳಿಗೆ ಚಾಚಿದನು. ಎಸ್ತೇರಳು ಸವಿಾಪಕ್ಕೆ ಬಂದು ಕೋಲಿನ ತುದಿಯನ್ನು ಮುಟ್ಟಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ ಆಕೆಯ ಮೇಲೆ ದಯವಿಟ್ಟು ತನ್ನ ಕೈಯಲ್ಲಿದ್ದ ಸುವರ್ಣದಂಡವನ್ನು ಆಕೆಯ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಲು
Kannada Bible (KNCL) BSI 2016
ಪ್ರಾಕಾರದಲ್ಲಿ ನಿಂತಿದ್ದ ಎಸ್ತೇರ್‍ರಾಣಿಯನ್ನು ಅವನು ಕಂಡೊಡನೆ, ಆಕೆಯೆಡೆ ಮೆಚ್ಚುಗೆ ತೋರಿ ತನ್ನ ಕೈಯಲ್ಲಿದ್ದ ಸ್ವರ್ಣರಾಜದಂಡವನ್ನು ಆಕೆಯ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಬಂದು ರಾಜದಂಡದ ತುದಿಯನ್ನು ಮುಟ್ಟಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ, ಆಕೆಗೆ ತನ್ನ ಮೆಚ್ಚುಗೆಯನ್ನು ತೋರಿ ತನ್ನ ಕೈಯಲ್ಲಿದ್ದ ಸ್ವರ್ಣದಂಡವನ್ನು ಎಸ್ತೇರಳ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಬಂದು ರಾಜದಂಡದ ತುದಿಯನ್ನು ಮುಟ್ಟಿದಳು.