Esther 5:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ದ್ರಾಕ್ಷಾರಸವನ್ನು ಸೇವಿಸುತ್ತಿರುವಾಗ ರಾಜನು ಎಸ್ತೇರಳನ್ನು ತಿರಿಗಿ ವಿಚಾರಿಸಿದನು, “ನೀನು ನನ್ನನ್ನು ಏನು ಕೇಳಬೇಕೆಂದಿದ್ದೀ? ಏನೂ ಬೇಕಾದರೂ ಕೇಳು. ನಾನು ಕೊಡುತ್ತೇನೆ. ಹೇಳು ಏನುಬೇಕು? ನನ್ನ ಅರ್ಧ ರಾಜ್ಯವನ್ನು ಕೇಳಿದರೂ ನಾನು ಕೊಡುತ್ತೇನೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದ್ರಾಕ್ಷಾರಸ ಪಾನಮಾಡುವಾಗ ಅರಸನು ತಿರುಗಿ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಅಂದನು.
Kannada BSI Bible 2016
ದ್ರಾಕ್ಷಾರಸದ ಔತಣದಲ್ಲಿ ಅರಸನು ಎಸ್ತೇರಳಿಗೆ--ನೀನು ಬೇಡಿಕೊಳ್ಳುವದೇನು? ಅದು ನಿನಗೆ ಕೊಡಲ್ಪಡುವದು. ನಿನ್ನ ವಿಜ್ಞಾಪನೆ ಏನು? ಅದು ಅರ್ಧ ರಾಜ್ಯದವರೆಗೆ ಇದ್ದರೂ ಕೊಡಲ್ಪ ಡುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ರಾಕ್ಷಾರಸಪಾನ ಮಾಡುವಾಗ ಅರಸನು ತಿರಿಗಿ ಎಸ್ತೇರಳಿಗೆ - ನಿನ್ನ ವಿಜ್ಞಾಪನೆ ಯಾವದು, ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು ಅನ್ನಲು ಎಸ್ತೇರಳು -
Kannada Bible (KNCL) BSI 2016
ದ್ರಾಕ್ಷಾರಸ ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು. ನಾನದನ್ನು ನೆರವೇರಿಸುವೆನು. ನೀನು ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎನ್ನಲು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದ್ರಾಕ್ಷಾರಸವನ್ನು ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ಈಗ ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.