Esther 5:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನು ಸಮ್ಮತಿಸುವದಾದರೆ ಮತ್ತು ನಾನು ಕೇಳಿಕೊಳ್ಳುವುದನ್ನು ಕೊಡಲು ರಾಜನಿಗೆ ಇಷ್ಟವಾದರೆ, ನಾಳೆ ನಾನು ಇನ್ನೊಂದು ಔತಣ ಸಮಾರಂಭವನ್ನು ಏರ್ಪಡಿಸುತ್ತೇನೆ. ಅದಕ್ಕೆ ನೀವೂ ಹಾಮಾನನೂ ಬರಬೇಕು. ಆಗ ನಾನು ನನಗೇನುಬೇಕೆಂದು ತಿಳಿಸುವೆನು” ಅಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ” ಎಂದು ಉತ್ತರಕೊಟ್ಟಳು.
Kannada BSI Bible 2016
ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ ಎಂದು ಉತ್ತರಕೊಟ್ಟಳು.
Kannada Bible (KNCL) BSI 2016
ನಾನು ತಮಗೋಸ್ಕರ ಮಾಡಿಸಲಿರುವ ಔತಣಕ್ಕೆ ನಾಳೆಯೂ ಹಾಮಾನನೊಂದಿಗೆ ದಯಮಾಡಿಸಬೇಕು. ಆಗ ತಾವು ಹೇಳಿದಂತೆ ನಾನು ಮಾಡುವೆನು. ಇದೇ ನನ್ನ ದೈನ್ಯ ಮನವಿ,” ಎಂದು ಉತ್ತರವಿತ್ತಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಿಗೆ ಸಮ್ಮತಿಯಾದರೆ, ಅರಸನಿಗೂ ಹಾಮಾನನಿಗೂ ನಾನು ಮಾಡಲಿರುವ ಔತಣಕ್ಕೆ ನಾಳೆಯೂ ಬರಬೇಕು. ಆಗ ಅರಸನ ಪ್ರಶ್ನೆಗೆ ಉತ್ತರಕೊಡುವೆನು,” ಎಂದಳು.