Esther 5:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಾಮಾನನು ಹರ್ಷ ತುಂಬಿದವನಾಗಿ ರಾಜ ಸನ್ನಿಧಿಯಿಂದ ತನ್ನ ಮನೆಗೆ ತೆರಳಿದನು. ಆದರೆ ಹೆಬ್ಬಾಗಿಲ ಬಳಿಯಲ್ಲಿ ಮೊರ್ದೆಕೈಯನ್ನು ನೋಡಿದಾಗ ಅವನ ಮೇಲೆ ಹಾಮಾನನ ಕೋಪ ಉಕ್ಕಿ ಬಂತು. ಯಾಕೆಂದರೆ ಮೊರ್ದೆಕೈ ಹಾಮಾನನಿಗೆ ಯಾವ ಗೌರವವನ್ನೂ ಕೊಟ್ಟಿರಲಿಲ್ಲ. ಮತ್ತು ಅವನಿಗೆ ಭಯಪಡಲಿಲ್ಲ. ಇದು ಹಾಮಾನನನ್ನು ಸಿಟ್ಟಿಗೇರುವಂತೆ ಮಾಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ, ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತಿರುವುದನ್ನು ಕಂಡು ಅವನ ಮೇಲೆ ಕೋಪಭರಿತನಾದನು.
Kannada BSI Bible 2016
ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಲಿನಲ್ಲಿ ಕೂತಿರುವದನ್ನು ಕಂಡು ಅವನ ಮೇಲೆ ಕೋಪಭರಿತನಾದನು.
Kannada Bible (KNCL) BSI 2016
ಅಂದು ಹಾಮಾನನು ಹರ್ಷಭರಿತನಾಗಿ ಮನೆಗೆ ಹಿಂದಿರುಗುತ್ತಿರುವಾಗ ಮೊರ್ದೆಕೈ ತನಗೆ ಭಯಪಡದೆ, ತನ್ನ ಮುಂದೆ ಏಳದೆಯೂ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡೇ ಇರುವುದನ್ನು ಕಂಡು ಅವನ ಮೇಲೆ ಕಡುಕೋಪಗೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಹಾಮಾನನು ಹರ್ಷಭರಿತನಾಗಿ ಹೊರಟುಹೋದನು. ಆದರೆ ಅರಮನೆಯ ಹೆಬ್ಬಾಗಿಲಲ್ಲಿರುವ ಮೊರ್ದೆಕೈ ತನಗೆ ಭಯಪಡದೆ ಕುಳಿತುಕೊಂಡೇ ಇರುವುದನ್ನು ಹಾಮಾನನು ಕಂಡು ಮೊರ್ದೆಕೈಯ ಮೇಲೆ ಕೋಪಗೊಂಡನು.