Esther 6:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಾಮಾನನು ಉಡುಪನ್ನೂ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ತೊಡಿಸಿ, ಕುದುರೆಯ ಮೇಲೆ ಕುಳ್ಳಿರಿಸಿ ನಗರದ ಮುಖ್ಯರಸ್ತೆಗಳಲ್ಲಿ ಕರೆದುಕೊಂಡು ಹೋಗುತ್ತಿರುವಾಗ, “ಅರಸನು ಸನ್ಮಾನಿಸುವ ಮನುಷ್ಯನಿಗೆ ಹೀಗೆಯೇ ಆಗುವದು” ಎಂದು ಪ್ರಕಟಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಮಾನನು ಆ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ತೆಗೆದುಕೊಂಡು ಬಂದು, ಮೊರ್ದೆಕೈಯನ್ನು ಭೂಷಿಸಿ, ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ, ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ” ಎಂದು ಪ್ರಕಟಣೆಮಾಡಿಸಿದನು.
Kannada BSI Bible 2016
ಆಗ ಹಾಮಾನನು ವಸ್ತ್ರವನ್ನೂ ಕುದು ರೆಯನ್ನೂ ತಕ್ಕೊಂಡು ಮೊರ್ದೆಕೈಯನ್ನು ಧರಿಸುವಂತೆ ಮಾಡಿ ಕುದುರೆಯ ಮೇಲೆ ಹತ್ತಿಸಿ ಪಟ್ಟಣದ ಬೀದಿ ಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಸಾರಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಮಾನನು ಆ ವಸ್ತ್ರಗಳನ್ನೂ ಕುದುರೆಯನ್ನೂ ತೆಗೆದುಕೊಂಡು ಬಂದು ಮೊರ್ದೆಕೈಯನ್ನು ಭೂಷಿಸಿ ಪಟ್ಟಣದ ಮಧ್ಯದಲ್ಲಿ ಮೆರವಣಿಗೆಮಾಡಿಸಿ ಅವನ ಮುಂದೆ - ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ ಎಂದು ಪ್ರಕಟಣೆ ಮಾಡಿಸಿದನು.
Kannada Bible (KNCL) BSI 2016
ಬೇರೆ ವಿಧಿಯಿಲ್ಲದೆ ಹಾಮಾನನು ಹೊರಟು ಆ ವಸ್ತ್ರಗಳನ್ನು, ಕುದುರೆಯನ್ನು ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಯನ್ನು ಗೌರವಿಸುವ ರೀತಿ ಇದೇ,” ಎಂದು ಪ್ರಕಟಪಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಹಾಮಾನನು ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ಮನುಷ್ಯನಿಗೆ ಗೌರವಿಸುವ ರೀತಿ ಇದೇ!” ಎಂದು ಸಾರಿದನು.