Esther 6:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸೇವಕನು ರಾಜನಿಗೆ ಪುಸ್ತಕದಿಂದ ಓದುತ್ತಾ ಹೋದನು. ರಾಜನನ್ನು ಕೊಲ್ಲುವ ಒಳಸಂಚಿನ ವಿಚಾರವನ್ನೂ ಕೇಳಿದನು. ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ದ್ವಾರಪಾಲಕರು ರಾಜನನ್ನು ಕೊಲ್ಲಲು ಒಳಸಂಚು ಮಾಡಿದಾಗ ಮೊರ್ದೆಕೈಗೆ ಅದು ತಿಳಿದುಬಂತು. ಕೂಡಲೇ ಅವನು ಬೇರೆಯವರ ಮುಖಾಂತರ ಅರಸನಿಗೆ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಷ್ವೇರೋಷ್ ರಾಜನನ್ನು ಕೊಲ್ಲಬೇಕೆಂದು ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರೂ ರಾಜಕಂಚುಕಿಗಳು ಒಳಸಂಚುಮಾಡಿದ ಸಂಗತಿಯೂ ಅದು ಮೊರ್ದೆಕೈ ಮುಖಾಂತರ ಬಯಲಿಗೆ ಬಂದ ಸಂಗತಿಯೂ ಅದರಲ್ಲಿ ಬರೆಯಲಾಗಿತ್ತು.
Kannada BSI Bible 2016
ಅವು ಅರಸನ ಮುಂದೆ ಓದಲ್ಪಟ್ಟಾಗ ದ್ವಾರಪಾಲಕರಾಗಿದ್ದ ಅರಸನ ಮನೆವಾರ್ತೆಯವರಲ್ಲಿ ಇಬ್ಬರು ಬಿಗೆತಾನನೂ ತೆರೆಷನೂ ಅರಸನಾದ ಅಹಷ್ವೇರೋಷನ ಮೇಲೆ ಕೈಹಾಕಲು ಹುಡುಕುತ್ತಾ ಇದ್ದರೆಂಬುವ ವರ್ತಮಾನ ವನ್ನು ಮೊರ್ದೆಕೈಯು ತಿಳಿಸಿದನೆಂದು ಬರೆಯಲ್ಪಟ್ಟಿದ್ದು ಸಿಕ್ತಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಷ್ವೇರೋಷ್ ರಾಜನನ್ನು ಕೊಲ್ಲಬೇಕೆಂದು ದ್ವಾರಪಾಲಕರಾದ ಬಿಗೆತಾನ್ ತೆರೆಷ್ ಎಂಬಿಬ್ಬರು ರಾಜಕಂಚುಕಿಗಳು ಒಳಸಂಚುಮಾಡಿದ ಸಂಗತಿಯೂ ಅದು ಮೊರ್ದೆಕೈಯ ಮುಖಾಂತರ ಬೈಲಿಗೆ ಬಂದ ಸಂಗತಿಯೂ ಅದರಲ್ಲಿ ಸಿಕ್ಕಿದವು.
Kannada Bible (KNCL) BSI 2016
ಅರಸನನ್ನು ಕೊಲ್ಲಲು ದ್ವಾರಪಾಲಕರಾದ ಬಿಗೆತಾನ್, ತೆರೆಷ್ ಎಂಬಿಬ್ಬರು ರಾಜಕಂಚುಕಿಗಳು ಪಿತೂರಿ ನಡೆಸಿದ್ದ ಪ್ರಕರಣ ಹಾಗೂ ಅದು ಮೊರ್ದೆಕೈಯ ಮುಖಾಂತರ ತಿಳಿದುಬಂದ ಲಿಖಿತ ವಿಷಯ ಅದರಲ್ಲಿ ಸಿಕ್ಕಿದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದನ್ನು ಅರಸನ ಮುಂದೆ ತಂದು ಓದಿಸಿದಾಗ, ದ್ವಾರಪಾಲಕರಾಗಿದ್ದ ರಾಜಕಂಚುಕಿಯರಲ್ಲಿ ಇಬ್ಬರಾದ ಬಿಗೆತಾನನೂ ತೆರೆಷನೂ ಅರಸನಾದ ಅಹಷ್ವೇರೋಷನನ್ನು ಕೊಲ್ಲಬೇಕೆಂದು ಒಳಸಂಚುಮಾಡಿದ ಘಟನೆಯು ಬರೆದಿತ್ತು. ಮೊರ್ದೆಕೈಯು ಹೇಗೆ ಅದನ್ನು ಅರಸನಿಗೆ ತಿಳಿಸಿದನೆಂದು ಸಹ ಅದರಲ್ಲಿ ಬರೆದಿತ್ತು.