Esther 6:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದನ್ನು ಕೇಳುತ್ತಿದ್ದ ಅರಸನು, “ಮೊರ್ದೆಕೈ ಹೀಗೆ ಮಾಡಿದುದಕ್ಕೆ ಯಾವ ಗೌರವ ಮತ್ತು ಬಹುಮಾನಗಳು ಕೊಡಲ್ಪಟ್ಟವು?” ಎಂದು ವಿಚಾರಿಸಿದನು. “ಮೊರ್ದೆಕೈಗೆ ಏನೂ ಕೊಡಲಿಲ್ಲ” ಎಂದು ಸೇವಕರು ಉತ್ತರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನು, “ಇದಕ್ಕಾಗಿ ಮೊರ್ದೆಕೈಗೆ ಯಾವ ಸ್ಥಾನಮಾನಗಳು ದೊರಕಿದವು?” ಎಂದು ವಿಚಾರಿಸಿದಾಗ ಅವನ ಸಾನ್ನಿಧ್ಯಸೇವಕರಾದ ಪರಿವಾರದವರು, “ಏನೂ ದೊರಕಲಿಲ್ಲ” ಎಂದು ಹೇಳಿದರು.
Kannada BSI Bible 2016
ಆಗ ಅರಸನು--ಇದಕ್ಕೋಸ್ಕರ ಮೊರ್ದೆಕೈಗೆ ಏನಾದರೂ ಘನವೂ ಮಹಿಮೆಯೂ ಮಾಡಲ್ಪಟ್ಟವೋ ಅಂದನು. ಅವನಿಗೆ ಮಾಡಿದ್ದು ಏನೂ ಇಲ್ಲವೆಂದೂ ಅರಸನನ್ನು ಸೇವಿಸುವ ಅವನ ಸೇವಕರು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನು - ಇದಕ್ಕಾಗಿ ಮೊರ್ದೆಕೈಗೆ ಯಾವ ಸ್ಥಾನಮಾನಗಳು ದೊರಕಿದವೆಂದು ವಿಚಾರಿಸಿದಾಗ ಅವನ ಸಾನ್ನಿಧ್ಯಸೇವಕರಾದ ಪರಿವಾರದವರು - ಏನೂ ದೊರಕಲಿಲ್ಲ ಎಂದು ಹೇಳಿದರು.
Kannada Bible (KNCL) BSI 2016
ಆಗ ಅರಸನು, “ಈ ಸತ್ಕಾರ್ಯಕ್ಕಾಗಿ ಮೊರ್ದೆಕೈಯನಿಗೆ ಯಾವ ಸನ್ಮಾನ ಮಾಡಲಾಯಿತೆಂದು ವಿಚಾರಿಸಿದಾಗ, ಅವನ ಆಸ್ಥಾನಸೇವಕರು ಯಾವುದೂ ಇಲ್ಲವೆಂದು ಉತ್ತರವಿತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು, “ಈ ಸತ್ಕಾರ್ಯಕ್ಕಾಗಿ ಮೊರ್ದೆಕೈಯನಿಗೆ ಯಾವ ಸನ್ಮಾನ ಮಾಡಲಾಯಿತು?” ಎಂದು ವಿಚಾರಿಸಿದನು. ಅರಸನ ಸೇವಕರು, “ಮೊರ್ದೆಕೈಯನಿಗೆ ಏನೂ ಮಾಡಿಲ್ಲ,” ಎಂದು ಹೇಳಿದರು.