Esther 6:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದೇ ಸಮಯದಲ್ಲಿ ಹಾಮಾನನು ಹೊರಾಂಗಣದಲ್ಲಿದ್ದನು. ಅವನು ತಾನು ತಯಾರಿಸಿಟ್ಟಿರುವ ಗಲ್ಲುಕಂಬದಲ್ಲಿ ಮೊರ್ದೆಕೈಯನ್ನು ಗಲ್ಲಿಗೆ ಹಾಕಲು ಅರಸನಿಂದ ಅಪ್ಪಣೆ ಪಡೆದುಕೊಳ್ಳಲು ಬಂದಿದ್ದನು. ಅರಸನು ಹೊರಾಂಗಣದಲ್ಲಿ “ಈಗ ತಾನೇ ಯಾರು ಬಂದರು?” ಎಂದು ಕೇಳಿದಾಗ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು, “ಪ್ರಾಕಾರದಲ್ಲಿ ಯಾರಿದ್ದಾರೆ?” ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಅರಸನ ಅಪ್ಪಣೆ ಪಡೆದುಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದು ನಿಂತಿದ್ದನು.
Kannada BSI Bible 2016
ಆಗ ಅರಸನು--ಅಂಗಳದಲ್ಲಿ ಯಾರು ಅಂದನು. ಆಗ ಹಾಮಾನನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿನ ಮರದಲ್ಲಿ ಅವನನ್ನು ಹಾಕುವ ಹಾಗೆ ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳದಲ್ಲಿ ಬಂದಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು - ಪ್ರಾಕಾರದಲ್ಲಿ ಯಾರಿದ್ದಾರೆ ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನೇ ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊರ್ದೆಕೈಯನ್ನು ನೇತುಹಾಕಿಸುವದಕ್ಕೆ ಅರಸನ ಅಪ್ಪಣೆಪಡಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದಿದ್ದನು.
Kannada Bible (KNCL) BSI 2016
ಕೂಡಲೆ ಅರಸನು, “ಯಾರಲ್ಲಿ, ಅಂಗಳದಲ್ಲಿ?” ಎಂದು ವಿಚಾರಿಸಿದನು. ಅಷ್ಟರಲ್ಲಿ, ತಾನೇ ಸಿದ್ಧಮಾಡಿಸಿದ್ದ ಗಲ್ಲುಮರಕ್ಕೆ ಮೊರ್ದೆಕೈಯನ್ನು ನೇಣುಹಾಕಿಸಲು ಅರಸನ ಅಪ್ಪಣೆಯನ್ನು ಪಡೆಯುವುದಕ್ಕೋಸ್ಕರ ಹಾಮಾನನು ಆಗತಾನೆ ಅರಮನೆಯ ಹೊರಗಣ ಅಂಗಳಕ್ಕೆ ಬಂದಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು, “ಯಾರು ಅಂಗಳದಲ್ಲಿ?” ಎಂದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲುಮರಕ್ಕೆ ಮೊರ್ದೆಕೈಯನ್ನು ನೇಣುಹಾಕಿಸಲು ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳಕ್ಕೆ ಬಂದಿದ್ದನು.