Esther 6:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಸನು ಧರಿಸಿದ ರಾಜ ವಸ್ತ್ರಗಳನ್ನು ಸೇವಕರ ಮೂಲಕ ತರಿಸು. ಅಲ್ಲದೆ ರಾಜನು ಸವಾರಿ ಮಾಡಿರುವ ಕುದುರೆಯನ್ನು ತರಿಸು. ಸೇವಕರು ಅದರ ಹಣೆಯ ಮೇಲೆ ರಾಜನ ವಿಶೇಷ ಗುರುತನ್ನು ಇಡಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅರಸನಿಗೆ, “ಯಾರನ್ನಾದರೂ ಸನ್ಮಾನಿಸಬೇಕೆಂದು ಅರಸನಿಗೆ ಇಷ್ಟವಿದ್ದರೆ ತಾನು ಧರಿಸಿಕೊಳ್ಳುವ ರಾಜ ವಸ್ತ್ರಗಳನ್ನೂ ಮತ್ತು ಸವಾರಿಮಾಡುವ ಪಟ್ಟದ ಕುದುರೆಯನ್ನೂ ತರಿಸಬೇಕು.
Kannada BSI Bible 2016
ಅರಸನು ಧರಿಸಿ ಕೊಳ್ಳುವ ರಾಜವಸ್ತ್ರಗಳೂ ಅರಸನು ಹತ್ತುವ ಕುದು ರೆಯೂ ಅವನ ತಲೆಯ ಮೇಲೆ ಇಟ್ಟುಕೊಳ್ಳುವ ರಾಜಕಿರೀಟವೂ ತರಲ್ಪಡಲಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ತಾನು ಧರಿಸಿಕೊಳ್ಳುವ ರಾಜವಸ್ತ್ರಗಳನ್ನೂ ಸವಾರಿಮಾಡುವ ಪಟ್ಟದ ಕುದುರೆಯನ್ನೂ ತರಿಸಿ
Kannada Bible (KNCL) BSI 2016
ಅರಸನು ಧರಿಸಿಕೊಳ್ಳುವ ರಾಜವಸ್ತ್ರಗಳನ್ನೂ ಸವಾರಿಮಾಡುವ ಪಟ್ಟದ ಕುದುರೆಯನ್ನೂ ತರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಧರಿಸಿಕೊಳ್ಳುವ ರಾಜವಸ್ತ್ರಗಳನ್ನೂ, ಅರಸನು ಸವಾರಿ ಮಾಡುವ ಕುದುರೆಯನ್ನೂ, ಅರಸನ ತಲೆಯ ಮೇಲೆ ಧರಿಸಿಕೊಳ್ಳುವ ರಾಜಕಿರೀಟವನ್ನೂ ತರಿಸಬೇಕು.