Esther 7:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೆಂದರೆ ನಾನು, ನನ್ನ ಜನರೂ ಕೊಲ್ಲಲ್ಪಡಲು, ನಾಶವಾಗಲು, ಸಂಪೂರ್ಣವಾಗಿ ನಿರ್ಮೂಲವಾಗಲು ಮಾರಲ್ಪಟ್ಟಿರುತ್ತೇವೆ. ನಾವು ಬರೇ ಗುಲಾಮರಾಗಿ ಮಾರಲ್ಪಟ್ಟಿದರೆ ನಾನು ಸುಮ್ಮನಿರುತ್ತಿದ್ದೆ. ಯಾಕೆಂದರೆ ಅದು ರಾಜನನ್ನು ತೊಂದರೆಪಡಿಸುವಂಥ ದೊಡ್ಡ ವಿಷಯವಲ್ಲ” ಎಂದು ಉತ್ತರಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ನಮ್ಮನ್ನು ಕೊಂದು ಸಂಹರಿಸಿ, ನಮ್ಮನ್ನು ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ನಾವು ಸೇವಕ ಸೇವಕಿಯರಾಗುವುದಕ್ಕೆ ಗುಲಾಮರಂತೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆಪಡಿಸುವುದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು ” ಎಂದು ಉತ್ತರಕೊಟ್ಟಳು.
Kannada BSI Bible 2016
ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ನಮ್ಮನ್ನು ಕೊಂದು ಸಂಹರಿಸಿ ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ದಾಸದಾಸಿಯರಾಗುವದಕ್ಕೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆ ಪಡಿಸುವದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು ಎಂದು ಉತ್ತರಕೊಟ್ಟಳು.
Kannada Bible (KNCL) BSI 2016
ಜನರು ನಮ್ಮನ್ನು ಕೊಂದು, ಸಂಹರಿಸಿ, ನಿರ್ನಾಮಗೊಳಿಸುವ ಹಾಗೆ ನಮ್ಮನ್ನು ಮಾರಲಾಯಿತು. ಬರೀ ಮಾರಾಟವಾಗಿದ್ದರೆ ಈ ದುರಂತ ಪರಿಸ್ಥಿತಿಯ ವಿಷಯದಲ್ಲಿ ಅರಸರಿಗೆ ತೊಂದರೆಪಡಿಸುವುದು ಸರಿಯಲ್ಲವೆಂದು ಸುಮ್ಮನಿದ್ದುಬಿಡುತ್ತಿದ್ದೆ,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಾನು ಮತ್ತು ನನ್ನ ಜನರು ದುರಂತಕ್ಕೂ, ಕೊಲೆಗೂ, ಸರ್ವನಾಶಕ್ಕೂ ಮಾರಟವಾಗಿದ್ದೇವೆ. ಒಂದು ವೇಳೆ, ನಾವು ದಾಸರಾಗಿಯಾಗಲಿ, ದಾಸಿಯರಾಗಲಿ ಮಾರಾಟವಾಗಿದ್ದರೆ ನಾನು ಸುಮ್ಮನಿರುತ್ತಿದ್ದೆ. ಅಂಥ ಕಷ್ಟಕ್ಕಾಗಿ ನಾನು ಅರಸನನ್ನು ತೊಂದರೆಪಡಿಸದೆ ಸುಮ್ಮನೆ ಇದ್ದುಬಿಡುತ್ತಿದ್ದೆನು,” ಎಂದಳು.