Esther 7:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ರಾಜನು ಎಸ್ತೇರಳಿಗೆ “ಹೀಗೆ ನಿನಗೆ ಯಾರು ಮಾಡಿದರು? ನಿನ್ನ ಜನರಿಗೆ ಇಂಥಾ ಕೆಲಸವನ್ನು ಮಾಡಲು ಯಾರಿಗೆ ಧೈರ್ಯವಾಯಿತು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಷ್ವೇರೋಷ್ ರಾಜನು ಎಸ್ತೇರ್ ರಾಣಿಯನ್ನು, “ಇಂಥ ದುಷ್ಕೃತ್ಯದ ಮೇಲೆ ಮನಸ್ಸಿಟ್ಟವನು ಯಾವನು? ಅವನೆಲ್ಲಿ?” ಎಂದು ಕೇಳಿದನು.
Kannada BSI Bible 2016
ಆಗ ಅರಸ ನಾದ ಅಹಷ್ವೇರೋಷನು--ರಾಣಿಯಾದ ಎಸ್ತೇರಳಿಗೆ ಪ್ರತ್ಯುತ್ತರವಾಗಿ ಈ ಪ್ರಕಾರ ಮಾಡಲು ತನ್ನ ಹೃದಯ ತುಂಬಿಕೊಂಡವನು ಯಾರು? ಅವನು ಎಲ್ಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಷ್ವೇರೋಷ್‍ರಾಜನು ಎಸ್ತೇರ್‍ರಾಣಿಯನ್ನು - ಇಂಥ ದುಷ್ಕೃತ್ಯದ ಮೇಲೆ ಮನಸ್ಸಿಟ್ಟವನು ಯಾವನು? ಅವನೆಲ್ಲಿ ಎಂದು ಕೇಳಲು
Kannada Bible (KNCL) BSI 2016
ಆಗ ಅರಸನು, “ಇಂಥ ದುಷ್ಕೃತ್ಯವನ್ನು ಎಸಗಲು ಸಂಚು ನಡೆಸಿದ ಕೇಡಿಗನು ಯಾರು? ಎಲ್ಲಿದ್ದಾನೆ ಅವನು?” ಎಂದು ಕೇಳಲು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನಾದ ಅಹಷ್ವೇರೋಷನು ರಾಣಿಯಾದ ಎಸ್ತೇರಳಿಗೆ, “ಯಾರು ಅವನು? ಈ ಪ್ರಕಾರ ಮಾಡಲು ಧೈರ್ಯಗೊಂಡವನು ಯಾರು? ಅವನು ಎಲ್ಲಿದ್ದಾನೆ?” ಎಂದನು.