Esther 7:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಸ್ತೇರಳು ಉತ್ತರಿಸುತ್ತಾ, “ನಮ್ಮನ್ನು ದ್ವೇಷಿಸುವ ಮನುಷ್ಯನು ಈ ಕೆಟ್ಟ ಹಾಮಾನನೇ” ಎಂದು ಹೇಳಿದಳು. ಆಗ ಹಾಮಾನನು ಭಯದಿಂದ ನಡುಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆಕೆಯು, “ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಮತ್ತು ಶತ್ರುವು ಈ ದುಷ್ಟ ಹಾಮಾನನೇ” ಎಂದಳು. ಇದನ್ನು ಕೇಳಿ ಹಾಮಾನನು ರಾಣಿಯ ಮುಂದೆ ಭಯಭೀತನಾದನು.
Kannada BSI Bible 2016
ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು - ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಈ ದುಷ್ಟ ಹಾಮಾನನೇ ಅಂದಳು. ಇದನ್ನು ಕೇಳಿದೊಡನೆ ಹಾಮಾನನು ಅರಸನ ಮತ್ತು ರಾಣಿಯ ಮುಂದೆ ಬೆಪ್ಪಾದನು.
Kannada Bible (KNCL) BSI 2016
ಆಕೆ, “ನಮ್ಮ ವೈರಿಯೂ ಶತ್ರುವೂ ಬೇರಾರೂ ಅಲ್ಲ; ಇಗೋ, ಈ ಹಾಮಾನನೇ ಆ ದುಷ್ಟ,” ಎಂದಳು. ಇದನ್ನು ಕೇಳಿದೊಡನೆ ಹಾಮಾನನು ಅರಸನ ಮತ್ತು ರಾಣಿಯ ಮುಂದೆ ಭಯದಿಂದ ನಡುಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಎಸ್ತೇರಳು, “ಆ ವೈರಿಯೂ ಹಗೆಗಾರನೂ ಬೇರೆ ಯಾರೂ ಅಲ್ಲ, ಈ ದುಷ್ಟ ಹಾಮಾನನೇ!” ಎಂದಳು. ಆಗ ಹಾಮಾನನು ಅರಸನ ಮುಂದೆಯೂ, ರಾಣಿಯ ಮುಂದೆಯೂ ಬೆಪ್ಪಾದನು.