Esther 7:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಸನು ಹೂತೋಟದಿಂದ ಹಿಂದಿರುಗಿ ಕೋಣೆಯೊಳಗೆ ಬಂದಾಗ ಹಾಮಾನನು ಆಸನದ ಮೇಲೆ ಒರಗಿದ್ದ ಎಸ್ತೇರ್ ರಾಣಿಯ ಆಸನದ ಮೇಲೆ ಬೀಳುವದನ್ನು ಕಂಡನು. ಅರಸನು ಸಿಟ್ಟು ತುಂಬಿದವನಾಗಿ, “ನನ್ನ ಮುಂದೆಯೇ ನೀನು ರಾಣಿಯ ಮೇಲೆ ಕೈಮಾಡುತ್ತೀಯಾ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸ ಪಾನಮಾಡಿದ ಗೃಹಕ್ಕೆ ಹಿಂತಿರುಗಿ ಬಂದು ಎಸ್ತೇರಳು ಒರಗಿಕೊಳ್ಳುವ ಸುಖಾಸನದ ಮೇಲೆ ಹಾಮಾನನು ಬಿದ್ದುಕೊಂಡಿರುವುದನ್ನು ಕಂಡು, “ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಬೇಕೆಂದಿರುತ್ತಾನೋ?” ಅಂದನು. ಅರಸನ ಬಾಯಿಂದ ಈ ಮಾತು ಹೊರಬಂದ ಕೂಡಲೆ ಸೇವಕರು ಹಾಮಾನನ ಮುಖಕ್ಕೆ ಮುಸುಕು ಹಾಕಿ ಎಳೆದುಕೊಂಡು ಹೋದರು.
Kannada BSI Bible 2016
ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸಪಾನ ಮಾಡಿದ ಗೃಹಕ್ಕೆ ತಿರಿಗಿ ಬಂದು ಎಸ್ತೇರಳು ಒರಗಿಕೊಳ್ಳುವ ಲೋಡಿನ ಮೇಲೆ ಹಾಮಾನನು ಬಿದ್ದುಕೊಂಡಿರುವದನ್ನು ಕಂಡು - ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಲೂ ಬೇಕೆಂದಿರುತ್ತಾನೋ ಅಂದನು. ಅರಸನ ಬಾಯಿಂದ ಈ ಮಾತು ಹೊರಟ ಕೂಡಲೇ ಸೇವಕರು ಹಾಮಾನನ ಮೋರೆಗೆ ಮುಸುಕು ಹಾಕಿದರು.
Kannada Bible (KNCL) BSI 2016
ಅರಸನು ಅರಮನೆಯ ತೋಟದಿಂದ, ತಾನು ದ್ರಾಕ್ಷಾರಸ ಸೇವಿಸುತ್ತಿದ್ದ ಕೊಠಡಿಗೆ ಹಿಂದಿರುಗಿಬಂದಾಗ ಎಸ್ತೇರಳು ಒರಗಿಕೊಂಡಿದ್ದ ಸುಖಾಸನದತ್ತ ಹಾಮಾನನು ಬಾಗಿರುವುದನ್ನು ಕಂಡು, “ಇದೇನು? ಇವನು ನನ್ನ ಮುಂದೆಯೇ ನನ್ನ ಅರಮನೆಯಲ್ಲಿಯೇ ರಾಣಿಯ ಮೇಲೆ ಬಲಾತ್ಕಾರ ಮಾಡಲು ಹೊರಟಿರುವನೆ?” ಎಂದನು. ಅರಸನ ಬಾಯಿಂದ ಈ ಮಾತುಗಳು ಹೊರಬಿದ್ದದ್ದೇ ತಡ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಎಳೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಅರಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ಹಿಂದಿರುಗಿ ಬಂದಾಗ, ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು, “ನನ್ನ ಮುಂದೆಯೇ ಇವನು ರಾಣಿಯನ್ನು ಬಲಾತ್ಕಾರ ಮಾಡಬೇಕೆಂದಿರುವನೋ?” ಎಂದನು. ಆ ಮಾತು ಅರಸನ ಬಾಯಿಂದ ಹೊರಟ ಕೂಡಲೆ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಹಾಕಿದರು.