Esther 8:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದೇ ದಿವಸದಲ್ಲಿ ರಾಜ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಆಸ್ತಿಪಾಸ್ತಿಗಳನ್ನೆಲ್ಲಾ ರಾಣಿ ಎಸ್ತೇರಳಿಗೆ ಕೊಟ್ಟನು. ಎಸ್ತೇರ್ ರಾಣಿಯು ಅರಸನಿಗೆ, “ಮೊರ್ದೆಕೈ ತನ್ನ ಸೋದರಣ್ಣನಾಗ ಬೇಕು” ಎಂದಳು. ನಂತರ ಮೊರ್ದೆಕೈಯು ಅರಸನನ್ನು ಕಾಣಲು ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ಎಸ್ತೇರ್ ರಾಣಿಗೆ ಕೊಟ್ಟನು. ಆಕೆಯು ಮೊರ್ದೆಕೈಗೂ ತನಗೂ ಇರುವ ಸಂಬಂಧವನ್ನು ತಿಳಿಸಿದಳು.
Kannada BSI Bible 2016
ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ರಾಣಿಯಾದ ಎಸ್ತೇರಳಿಗೆ ಕೊಟ್ಟನು. ಇದಲ್ಲದೆ ಮೊರ್ದೆಕೈ ಅರಸನ ಬಳಿಗೆ ಬಂದನು; ಅವನು ತನಗೆ ಏನಾಗಬೇಕೋ ಅದನ್ನು ಎಸ್ತೇರಳು ತಿಳಿಸಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ಎಸ್ತೇರ್‍ರಾಣಿಗೆ ಕೊಟ್ಟನು. ಆಕೆಯು ಮೊರ್ದೆಕೈಗೂ ತನಗೂ ಇರುವ ಸಂಬಂಧವನ್ನು ತಿಳಿಸಿದ್ದರಿಂದ ಅರಸನು ಮೊರ್ದೆಕೈಯನ್ನು ಒಡ್ಡೋಲಗದಲ್ಲಿ ಸೇರಿಸಿ
Kannada Bible (KNCL) BSI 2016
ಆ ದಿನದಂದೇ ಅರಸ ಅಹಷ್ವೇರೋಷನು, ಯೆಹೂದ್ಯರ ಶತ್ರುವಾದ ಹಾಮಾನನು ವಾಸವಾಗಿದ್ದ ನಿವಾಸವನ್ನು ರಾಣಿ ಎಸ್ತೇರಳಿಗೆ ಕೊಟ್ಟನು. ಆಕೆ ತನಗೂ ಮೊರ್ದೆಕೈಗೂ ಇದ್ದ ನಿಜ ಸಂಬಂಧವನ್ನು ಅರಸನಿಗೆ ತಿಳಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಸೊತ್ತನ್ನು ರಾಣಿಯಾದ ಎಸ್ತೇರಳಿಗೆ ಕೊಟ್ಟನು. ಇದಲ್ಲದೆ ಮೊರ್ದೆಕೈ ಅರಸನ ಬಳಿಗೆ ಬಂದನು. ಏಕೆಂದರೆ ಮೊರ್ದೆಕೈ ತನಗೆ ಸಂಬಂಧಿಕನು ಎಂದು ಎಸ್ತೇರಳು ತಿಳಿಸಿದ್ದಳು.