Esther 8:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನ ಆಜ್ಞೆಯ ಪ್ರಕಾರ ಮೊರ್ದೆಕೈ ರಾಜಶಾಸನವನ್ನು ಬರೆಯಿಸಿದನು. ಅದಕ್ಕೆ ರಾಜಮುದ್ರೆಯನ್ನು ಒತ್ತಿಸಿ ರಾಜನಿಗಾಗಿ ವಿಶೇಷವಾಗಿ ಬೆಳೆಸಿದ ಅತ್ಯಂತ ವೇಗವಾಗಿ ಓಡುವ ಕುದುರೆಗಳ ಮೂಲಕ ಸಂದೇಶವಾಹಕರಿಂದ ರಾಜ್ಯದ ಮೂಲೆ ಮೂಲೆಗೆ ರಾಜಾಜ್ಞೆಯನ್ನು ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಆ ಪತ್ರಗಳಿಗೆ ರಾಜಮುದ್ರೆಯನ್ನು ಹಾಕಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದಂಥ, ಅರಸನ ಸೇವೆಗಾಗಿ ಉಪಯೋಗಿಸಲ್ಪಡುತ್ತಿದ್ದ ವೇಗವಾಗಿ ಓಡುವಂಥ ಕುದುರೆಗಳ ಮುಖಾಂತರ ಕಳುಹಿಸಿದನು.
Kannada BSI Bible 2016
ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು, ಕುದುರೆಗಳನ್ನು, ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೇ ಒಂಟೆಗಳ ಮೇಲೆಯೂ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಅವುಗಳಿಗೆ ರಾಜಮುದ್ರೆಯನ್ನು ಹಾಕಿ ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದ ಸವಾರಿಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರ ಮುಖಾಂತರ ಕಳುಹಿಸಿದನು.
Kannada Bible (KNCL) BSI 2016
ಅರಸನ ಹೆಸರಿನಲ್ಲಿ ಬರೆಯಲಾದ ಈ ಪತ್ರಗಳಿಗೆ ಮೊರ್ದೆಕೈ ರಾಜಮುದ್ರೆಯನ್ನು ಒತ್ತಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದ ಸವಾರಿ ಕುದುರೆಗಳನ್ನೇರಿ ಹೊರಟ ಅಂಚೆಯವರ ಮುಖಾಂತರ ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೊರ್ದೆಕೈ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದ ಪತ್ರಗಳಿಗೆ ಅರಸನ ಉಂಗುರದಿಂದ ಮುದ್ರೆಹಾಕಿ, ಸವಾರಿ ಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರ ಮೂಲಕ ವೇಗವಾಗಿ ಕಳುಹಿಸಿದನು.