Esther 8:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಮಾಡಲು ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರಿಗೆ ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆ ದಿನವನ್ನು ಗೊತ್ತುಪಡಿಸಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮ್ಮ ಪ್ರಾಣರಕ್ಷಣೆಗಾಗಿ ಎದ್ದು, ತಮ್ಮ ವಿರುದ್ಧವಾಗಿ ಆಯುಧಗಳೊಡನೆ ನೆರೆದು ಬರುವ ಎಲ್ಲಾ ಜನಾಂಗಗಳವರನ್ನೂ, ಸಂಸ್ಥಾನಗಳವರನ್ನೂ, ಅವರ ಹೆಂಡತಿಯರು ಮಕ್ಕಳು ಸಹಿತವಾಗಿ ಕೊಂದು, ಸಂಹರಿಸಿ, ನಿರ್ನಾಮಗೊಳಿಸಬೇಕು.
Kannada BSI Bible 2016
ಅವರು ಪ್ರತಿ ಪಟ್ಟಣದಲ್ಲಿ ಕೂಡಿಕೊಂಡು ತಮ್ಮ ಪ್ರಾಣಕ್ಕೋಸ್ಕರ ಎದ್ದು ಆ ಪ್ರಾಂತ್ಯದ ಜನರ ಸೈನ್ಯದಲ್ಲಿ ಯಾರಾದರೂ ಅವರಿಗೆ ವಿರೋಧವಾಗಿ ಎದ್ದರೆ ಅವರನ್ನು, ಚಿಕ್ಕವ ರನ್ನೂ ಸ್ತ್ರೀಯರನ್ನೂ ಕೂಡ ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅಪ್ಪಣೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹದಿಮೂರನೆಯ ದಿನದಲ್ಲಿ ಕೂಡಿಕೊಂಡು ತಮ್ಮ ಪ್ರಾಣರಕ್ಷಣೆಗಾಗಿ ಎದ್ದು ತಮಗೆ ವಿರೋಧವಾಗಿ ಆಯುಧಗಳೊಡನೆ ನೆರೆದು ಬರುವ ಎಲ್ಲಾ ಜನಾಂಗಗಳವರನ್ನೂ ಸಂಸ್ಥಾನಗಳವರನ್ನೂ ಅವರ ಹೆಂಡತಿಯರು ಮಕ್ಕಳು ಸಹಿತವಾಗಿ ಕೊಂದು ಸಂಹರಿಸಿ ನಿರ್ನಾಮಗೊಳಿಸಿ ಅವರ ಸೊತ್ತನ್ನು ಸೂರೆಮಾಡಬೇಕೆಂದೂ
Kannada Bible (KNCL) BSI 2016
ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿ, ತಮ್ಮ ಪ್ರಾಣರಕ್ಷಣೆಗಾಗಿ ದಂಗೆಯೆದ್ದು, ತಮಗೆ ವಿರೋಧವಾಗಿ ಆಯುಧಗಳೊಡನೆ ನೆರೆದುಬರುವ ಎಲ್ಲಾ ಜನಾಂಗಗಳವರನ್ನೂ ಸಂಸ್ಥಾನಗಳವರನ್ನೂ ಮಕ್ಕಳು ಮಹಿಳೆಯರೆನ್ನದೆ ಎಲ್ಲರನ್ನೂ, ಕೊಂದು ಸಂಹರಿಸಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಇದನ್ನು ಮಾಡಲು ನೇಮಿಸಿದ ದಿನವು, ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನವಾಗಿತ್ತು.