Esther 8:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ರಾಜಾಜ್ಞೆಯು ದೇಶದ ಶಾಸನವಾಯಿತು. ಮತ್ತು ಇದನ್ನು ರಾಜ್ಯದ ಎಲ್ಲಾ ಸಂಸ್ಥಾನಗಳ ಎಲ್ಲಾ ಜನರಿಗೆ ಪ್ರಕಟಿಸಲಾಯಿತು. ಯಾವ ದಿವಸದಲ್ಲಿ ಯೆಹೂದ್ಯರನ್ನು ನಿರ್ಮೂಲ ಮಾಡಲು ಆಜ್ಞೆ ಹೊರಡಿತ್ತೋ ಆ ದಿವಸದಲ್ಲಿಯೆ ಯೆಹೂದ್ಯರು ತಮ್ಮ ವೈರಿಗಳನ್ನು ಎದುರಿಸಿ ಅವರನ್ನು ಕೊಲ್ಲುವುದಕ್ಕೆ ತಯಾರಿರಬೇಕೆಂದು ಈ ಆಜ್ಞೆಯನ್ನು ಹೊರಡಿಸಿದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಸೊತ್ತನ್ನು ಸೂರೆಮಾಡಬೇಕು, ಈ ಪತ್ರದ ಒಂದೊಂದು ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕು, ಆ ದಿನದಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೆ ಸಿದ್ಧರಾಗಿರಬೇಕು” ಎಂದು ಅಪ್ಪಣೆಮಾಡಿದ್ದನು.
Kannada BSI Bible 2016
ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆಮುಯ್ಯಿ ಮಾಡಲು ಆ ದಿನಕ್ಕೆ ಅವರು ಸಿದ್ಧವಾಗಿರುವ ಹಾಗೆ ಈ ಆಜ್ಞಾಪತ್ರದ ಪ್ರತಿಯು ಪ್ರಾಂತ್ಯ, ಪ್ರಾಂತ್ಯದಲ್ಲಿ ಸಕಲ ಜನರಿಗೂ ಸಾರಿ ಹೇಳ ಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಪತ್ರದ ಒಂದೊಂದು ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕೆಂದೂ ಆ ದಿನದಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವದಕ್ಕೆ ಸಿದ್ಧರಾಗಿರಬೇಕೆಂದೂ ಅಪ್ಪಣೆಮಾಡಿದನು.
Kannada Bible (KNCL) BSI 2016
ನಿರ್ನಾಮಗೊಳಿಸಿ ಅವರ ಆಸ್ತಿಪಾಸ್ತಿಯನ್ನೆಲ್ಲಾ ಸೂರೆಮಾಡಬೇಕು; ಈ ಪತ್ರದ ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜಾಜ್ಞೆಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕು. ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಸನ್ನದ್ಧರಾಗಿರಬೇಕು.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳಲು, ಅವರು ಆ ದಿನ ಸಿದ್ಧವಾಗಿರಬೇಕೆಂದು ಈ ಆಜ್ಞಾಪತ್ರದ ಪ್ರತಿಯು ಪ್ರಾಂತ ಪ್ರಾಂತಗಳಲ್ಲಿ ಕಾನೂನಾಗಿ ಸಕಲ ದೇಶದವರಿಗೂ ಸಾರಿ ಹೇಳಲಾಗಿತ್ತು.