Esther 8:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಆಜ್ಞೆಯನ್ನು ಜನರಿಗೆ ತಲುಪಿಸಲು ಅರಸನು ಸಂದೇಶ ವಾಹಕರನ್ನು ಅವಸರಪಡಿಸಿದನು. ಮತ್ತು ಶೂಷನ್ ನಗರದಲ್ಲೂ ಇದು ಪ್ರಕಟವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ಅರಮನೆಯ ಸವಾರಿಕುದುರೆಗಳನ್ನು ಹತ್ತಿಕೊಂಡು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿ ಶೀಘ್ರವಾಗಿ ಹೊರಟರು.
Kannada BSI Bible 2016
ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಓಡಿಸಲ್ಪಟ್ಟ ಕಾರಣ ಹೇಸರ ಕತ್ತೆಗಳ ಮೇಲೆಯೂ ವೇಗವಾದ ಒಂಟೆಗಳ ಮೇಲೆಯೂ ಹೊರಟರು. ಈ ಆಜ್ಞೆಯು ಶೂಷನಿನ ಅರಮನೆಯಲ್ಲಿ ಕೊಡಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅರಮನೆಯ ಸವಾರಿ ಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿಶೀಘ್ರವಾಗಿ ಹೊರಟರು.
Kannada Bible (KNCL) BSI 2016
ಅರಸನ ಈ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾದ ಕೂಡಲೆ ಅದರಿಂದ ಪ್ರೇರಿತರಾದ ಅಂಚೆಯವರು ಅರಮನೆಯ ಸವಾರಿ ಕುದುರೆಗಳನ್ನೇರಿ ಅತಿಶೀಘ್ರವಾಗಿ ಧಾವಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಚೆಯವರು ಅರಸನ ಆಜ್ಞೆಯಿಂದ ಪ್ರೇರಿತರಾಗಿ ಅರಮನೆಯ ಕುದುರೆಗಳ ಮೇಲೆ ಅತಿ ಶೀಘ್ರವಾಗಿ ಹೊರಟರು. ಈ ಆಜ್ಞೆಯು ಶೂಷನ್ ನಗರದ ಅರಮನೆಯಲ್ಲಿ ಕೊಡಲಾಗಿತ್ತು.