Esther 8:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಾಮಾನನಿಂದ ತಿರಿಗಿ ಪಡೆದುಕೊಂಡಿದ್ದ ತನ್ನ ಮುದ್ರೆಯುಂಗುರವನ್ನು ರಾಜನು ಮೊರ್ದೆಕೈಗೆ ಕೊಟ್ಟನು. ಎಸ್ತೇರ್ ರಾಣಿಯು ಹಾಮಾನನ ಮನೆಯ ಆಡಳಿತವನ್ನು ಮೊರ್ದೆಕೈಗೆ ಕೊಡಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನು ತಾನು ಹಾಮಾನನಿಗೆ ನೀಡಿದ್ದ ತನ್ನ ಮುದ್ರೆಯುಂಗುರವನ್ನು ಮೊರ್ದೆಕೈಗೆ ಕೊಟ್ಟನು; ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಅವನಿಗೆ ಒಪ್ಪಿಸಿದಳು.
Kannada BSI Bible 2016
ಆಗ ಅರಸನು ತಾನು ಹಾಮಾ ನನಿಂದ ತಕ್ಕೊಂಡ ತನ್ನ ಉಂಗುರವನ್ನು ತೆಗೆದು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆ ಕೈಯನ್ನು ಹಾಮಾನನ ಮನೆಯ ಅಧಿಕಾರಿಯಾಗಿ ಇರಿಸಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾನು ಹಾಮಾನನಿಂದ ತೆಗಿಸಿದ್ದ ತನ್ನ ಮುದ್ರೆಯುಂಗರವನ್ನು ಅವನಿಗೆ ಕೊಟ್ಟನು; ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಅವನಿಗೆ ಒಪ್ಪಿಸಿದಳು.
Kannada Bible (KNCL) BSI 2016
ಆಗ ಅರಸನು ಮೊರ್ದೆಕೈಯನ್ನು ಗೌರವದಿಂದ ಸ್ವಾಗತಿಸಿ ಹಾಮಾನನಿಂದ ತೆಗೆಸಿದ ಮುದ್ರೆ ಉಂಗುರವನ್ನು ಅವನಿಗೆ ತೊಡಿಸಿದನು. ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಮೊರ್ದೆಕೈಯನಿಗೆ ವಹಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ತಾನು ಹಾಮಾನನಿಂದ ತೆಗೆದುಕೊಂಡ ತನ್ನ ಮುದ್ರೆಉಂಗುರವನ್ನು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆಕೈಯನ್ನು ಹಾಮಾನನ ಸೊತ್ತಿಗೆ ಅಧಿಕಾರಿಯಾಗಿ ನೇಮಿಸಿದಳು.