Esther 8:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಸ್ತೇರಳು ತಿರುಗಿ ರಾಜನನ್ನು ಮಾತಾಡಿಸುವುದಕ್ಕೆ ಹೋದಳು. ಎಸ್ತೇರಳು ಅರಸನ ಪಾದಗಳಿಗೆ ಅಡ್ಡಬಿದ್ದು ಅಳಲು ಪ್ರಾರಂಭಿಸಿದಳು. ಅವಳು ಹಾಮಾನನ ದುಷ್ಟ ಯೋಜನೆಯನ್ನು ರದ್ದುಮಾಡಬೇಕೆಂದು ಅರಸನನ್ನು ಬೇಡಿಕೊಂಡಳು. ಅಗಾಗನ ವಂಶಿಕನಾದ ಹಾಮಾನನು ಯೆಹೂದ್ಯರನ್ನು ನಿರ್ಮೂಲ ಮಾಡುವ ಹಂಚಿಕೆಯನ್ನು ಮಾಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಸ್ತೇರಳು ಪುನಃ ಅರಸನನ್ನು ಮಾತನಾಡಿಸುವುದಕ್ಕೆ ಹೋಗಿ ಅವನ ಪಾದಗಳಿಗೆ ಬಿದ್ದು, ಅಳುತ್ತಾ, “ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಕಲ್ಪಿಸಿದ ದುಷ್ಟ ಯೋಜನೆಗಳನ್ನು, ಅಪಾಯಗಳನ್ನು ನಿವಾರಿಸಬೇಕು” ಎಂದು ವಿಜ್ಞಾಪಿಸಿದಳು.
Kannada BSI Bible 2016
ಎಸ್ತೇರಳು ಅರಸನ ಮುಂದೆ ತಿರಿಗಿ ಮಾತನಾಡಿ ಅವನ ಪಾದಗಳ ಮುಂದೆ ಬಿದ್ದು ಅತ್ತು ಅಗಾಗನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆ ದುಹಾಕಲು ಬೇಡಿಕೊಂಡಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಸ್ತೇರಳು ತಿರಿಗಿ ಅರಸನನ್ನು ಮಾತಾಡಿಸುವದಕ್ಕೆ ಹೋಗಿ ಅವನ ಪಾದಗಳಿಗೆ ಬಿದ್ದು ಅತ್ತು - ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಕಲ್ಪಿಸಿದ ಅಪಾಯಗಳನ್ನು ನಿವಾರಿಸಬೇಕೆಂದು ವಿಜ್ಞಾಪಿಸಲು
Kannada Bible (KNCL) BSI 2016
ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳಿಗೆರಗಿ, ಅಳುತ್ತಾ, ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಹೂಡಿದ್ದ ದುಷ್ಟ ಯೋಜನೆಯನ್ನು ರದ್ದುಪಡಿಸುವಂತೆ ವಿಜ್ಞಾಪಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳ ಮುಂದೆ ಬಿದ್ದು, ಅತ್ತುಕೊಂಡು ಬೇಡಿದಳು. ಅಗಾಗನ ವಂಶದನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆದುಹಾಕಲು ಬೇಡಿಕೊಂಡಳು.