Esther 8:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಹಷ್ವೇರೋಷನು ಎಸ್ತೇರ್ ರಾಣಿಗೆ ಮತ್ತು ಮೊರ್ದೆಕೈಗೆ, “ಹಾಮಾನನು ಯೆಹೂದ್ಯರನ್ನು ದ್ವೇಷಿಸಿದ ಕಾರಣ ಅವನನ್ನು ಗಲ್ಲಿಗೇರಿಸುವಂತೆ ನನ್ನ ಸಿಪಾಯಿಗಳಿಗೆ ಆಜ್ಞಾಪಿಸಿದೆನು; ಅವನ ಆಸ್ತಿಪಾಸ್ತಿಗಳನ್ನೆಲ್ಲಾ ಎಸ್ತೇರಳ ವಶಕ್ಕೆ ಕೊಟ್ಟೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅಹಷ್ವೇರೋಷ್ ರಾಜನು ರಾಣಿಯಾದ ಎಸ್ತೇರಳಿಗೂ ಮತ್ತು ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೆ ಹಾಕಿಸಿ, ಅವನ ಸೊತ್ತನ್ನು ಎಸ್ತೇರಳಿಗೆ ದಾನಮಾಡಿದ್ದೇನಲ್ಲಾ, ಅರಸನ ಹೆಸರಿನಲ್ಲಿ ಬರೆಯಲ್ಪಟ್ಟು ರಾಜಮುದ್ರೆಯಿರುವ ಲೇಖನವನ್ನು ಯಾರೂ ರದ್ದುಮಾಡಲು ಬರುವುದಿಲ್ಲ.
Kannada BSI Bible 2016
ಆಗ ಅರಸನಾದ ಅಹಷ್ವೇ ರೋಷನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯ ನಾದ ಮೊರ್ದೆಕೈಗೂ ಹೇಳಿದ್ದೇನಂದರೆ--ಇಗೋ, ಹಾಮಾನನು ಯೆಹೂದ್ಯರ ಮೇಲೆ ತನ್ನ ಕೈ ಹಾಕಿದ್ದ ರಿಂದ ಅವನ ಮನೆಯನ್ನು ಎಸ್ತೇರಳಿಗೆ ಕೊಟ್ಟೆನು. ಅವನನ್ನು ಗಲ್ಲಿಗೆ ಹಾಕಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅಹಷ್ವೇರೋಷ್ ರಾಜನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯನಾದ ಮೊರ್ದೆಕೈಗೂ - ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಕೈಯೆತ್ತಿದದರಿಂದ ಅವನನ್ನು ಗಲ್ಲಿಗೆ ಹಾಕಿಸಿ ಅವನ ಸೊತ್ತನ್ನು ಎಸ್ತೇರಳಿಗೆ ದಾನಮಾಡಿದ್ದೇನಲ್ಲಾ!
Kannada Bible (KNCL) BSI 2016
ಆಗ ಅರಸನು, ರಾಣಿ ಎಸ್ತೇರಳಿಗೂ ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರ ವಿರುದ್ಧ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೇರಿಸಿ ಅವನ ಮನೆಯನ್ನು ಎಸ್ತೇರಳಿಗೆ ದಾನ ಮಾಡಿದೆನಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನಾದ ಅಹಷ್ವೇರೋಷನು ಎಸ್ತೇರ್ ರಾಣಿಗೂ ಯೆಹೂದ್ಯನಾದ ಮೊರ್ದೆಕೈಗೂ ಹೇಳಿದ್ದೇನೆಂದರೆ, “ಇಗೋ, ಹಾಮಾನನು ಯೆಹೂದ್ಯರ ವಿರುದ್ಧ ಕೈಯೆತ್ತಿದ್ದರಿಂದ ಅವನ ಸೊತ್ತನ್ನು ಎಸ್ತೇರಳಿಗೆ ಕೊಟ್ಟೆನು. ಹಾಮಾನನನ್ನು ಗಲ್ಲಿಗೆ ಹಾಕಿದ್ದಾರೆ.