Esther 8:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದೂಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.
Kannada BSI Bible 2016
ಆಗ ಅದೇ ಕಾಲದಲ್ಲಿ ಶೀವಾನ್‌ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತ ಮೂರನೆಯ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ ಭಾಷೆಯಲ್ಲಿಯೂ ಲಿಖಿತವಾದವು.
Kannada Bible (KNCL) BSI 2016
ಆಗ ರಾಜಲೇಖಕರನ್ನು ಕರೆಯಿಸಲಾಯಿತು. ಇವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೇ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ, ಯೆಹೂದ್ಯರಿಗೂ ಭಾರತ ಮೊದಲ್ಗೊಂಡು ಕೂಷಿನವರೆಗೂ ಹರಡಿರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ, ಆಯಾ ಸಂಸ್ಥಾನಗಳ ಲಿಪಿಯಲ್ಲೂ ಆಯಾ ಜನಾಂಗಗಳ ಭಾಷೆಯಲ್ಲೂ ಪತ್ರಗಳನ್ನು ಬರೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೂರನೆಯ ತಿಂಗಳಾದ ಸಿವಾನ್ ಎಂಬ ಮಾಸದ ಇಪ್ಪತ್ತಮೂರನೆಯ ದಿನದಲ್ಲಿ ಅರಸನ ಲೇಖಕರನ್ನು ಕರೆಯಲಾಯಿತು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ, ಸಕಲ ಯೆಹೂದ್ಯರಿಗೂ ಹಿಂದೂ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ, ಅಧಿಕಾರಿಗಳಿಗೂ, ಅವರವರ ಪ್ರಾಂತದ ಲಿಪಿಯಲ್ಲಿಯೂ, ಅವರವರ ಭಾಷೆಯಲ್ಲಿಯೂ ಪತ್ರಗಳನ್ನು ಬರೆಯಲಾಯಿತು.