Esther 9:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದೇ ರೀತಿ ಅರಸನು ಆಜ್ಞಾಪಿಸಿದನು. ರಾಜಾಜ್ಞೆಯು ಇನ್ನೊಂದು ದಿವಸ ಮುಂದುವರಿಯಿತು ಮತ್ತು ಹಾಮಾನನ ಹತ್ತು ಮಂದಿ ಗಂಡುಮಕ್ಕಳನ್ನು ಗಲ್ಲಿಗೆ ಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನು ಹಾಗೆ ಮಾಡುವುದಕ್ಕೆ ಅಪ್ಪಣೆಕೊಟ್ಟನು. ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾಯಿತು ಮತ್ತು ಹಾಮಾನನ ಹತ್ತು ಮಕ್ಕಳನ್ನು ಗಲ್ಲಿಗೆ ಏರಿಸಲಾಯಿತು.
Kannada BSI Bible 2016
ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಕೊಡಲ್ಪಟ್ಟಾಗ ಅವರು ಹಾಮಾನನ ಹತ್ತು ಮಂದಿ ಕುಮಾರರನ್ನೂ ಗಲ್ಲಿಗೆ ಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್‍ಕೋಟೆಯಲ್ಲಿ ಪ್ರಕಟವಾಯಿತು. ಮತ್ತು ಹಾಮಾನನ ಹತ್ತು ಮಂದಿ ಮಕ್ಕಳನ್ನು ಗಲ್ಲಿಗೆ ಹಾಕಿದರು.
Kannada Bible (KNCL) BSI 2016
ಅರಸನು ಎಸ್ತೇರಳಿಗೆ ತನ್ನ ಇಚ್ಛೆಯಂತೆ ಮಾಡಲು ಅಪ್ಪಣೆಕೊಟ್ಟನು. ಕೂಡಲೆ ಇದಕ್ಕೆ ಸಂಬಂಧಪಟ್ಟ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾಯಿತು. ಹಾಮಾನನ ಹತ್ತುಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಜಾರಿಗೆಬಂದಾಗ ಅವರು ಹಾಮಾನನ ಹತ್ತು ಮಂದಿ ಪುತ್ರರ ಶವವನ್ನು ಗಲ್ಲಿಗೆ ಹಾಕಿದರು.