Esther 9:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೂಷನ್ ನಗರದಲ್ಲಿದ್ದ ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆಯ ದಿನದಂದು ಒಟ್ಟಾಗಿ ಸೇರಿ ಆ ದಿವಸ ಮುನ್ನೂರು ಮಂದಿಯನ್ನು ಹತಿಸಿದರೆ ಹೊರತು, ಅವರ ಆಸ್ತಿಪಾಸ್ತಿಯನ್ನು ಮುಟ್ಟಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಲ್ಲೂ ಒಟ್ಟಿಗೆ ಸೇರಿ ಅಲ್ಲಿನ ಮುನ್ನೂರು ಜನರನ್ನು ಕೊಂದರು; ಆದರೆ ಕೊಳ್ಳೆಗೆ ಕೈಹಾಕಲಿಲ್ಲ.
Kannada BSI Bible 2016
ಇದಲ್ಲದೆ ಶೂಷ ನಿನಲ್ಲಿರುವ ಯೆಹೂದ್ಯರು ಅಡಾರೆಂಬ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಕೂಡಿಕೊಂಡು ಶೂಷನಿನಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೂಷನಿನ ಯೆಹೂದ್ಯರು ಫಾಲ್ಗುನಮಾಸದ ಹದಿನಾಲ್ಕನೆಯ ದಿನದಲ್ಲೂ ಕೂಡಿಕೊಂಡು ಅಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಕೊಳ್ಳೆಗೆ ಕೈಹಾಕಲಿಲ್ಲ.
Kannada Bible (KNCL) BSI 2016
ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಂದೂ ಒಟ್ಟಾಗಿ ಸೇರಿ ಮುನ್ನೂರು ಮಂದಿಯನ್ನು ಕೊಂದುಹಾಕಿದರು. ಆದರೆ ಸುಲಿಗೆಗೆ ಕೈಹಾಕಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಶೂಷನಿನಲ್ಲಿರುವ ಯೆಹೂದ್ಯರು ಆದಾರ್ ಎಂಬ ಫಾಲ್ಗುನಮಾಸದ ಹದಿನಾಲ್ಕನೆಯ ದಿವಸದಲ್ಲಿ ಶೂಷನಿನಲ್ಲಿ ಒಟ್ಟಾಗಿ ಸೇರಿ ಮುನ್ನೂರು ಮಂದಿಗೆ ಮರಣದಂಡನೆಯನ್ನು ವಿಧಿಸಿದರು. ಆದರೆ ಅವರು ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.