Esther 9:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇಶದ ಎಲ್ಲಾ ಹಳ್ಳಿಗಳಲ್ಲಿದ್ದ ಯೆಹೂದ್ಯರು ಆದಾರ್ ತಿಂಗಳಿನ ಹದಿನಾಲ್ಕನೆಯ ದಿವಸವನ್ನು ಪೂರಿಮ್ ದಿವಸವನ್ನಾಗಿ ಆಚರಿಸಿದರು. ಹದಿನಾಲ್ಕನೆಯ ದಿವಸವು ಅವರಿಗೆ ಸಂತಸದ ಹಬ್ಬ. ಆ ದಿವಸ ಅವರು ಔತಣಮಾಡಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಟ್ಟು ಕಳುಹಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ, ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ.
Kannada BSI Bible 2016
ಆದಕಾರಣ ಗ್ರಾಮಗಳಲ್ಲಿಯೂ ಬೈಲು ಪ್ರಾಂತ್ಯಗಳ ಪಟ್ಟಣಗಳಲ್ಲಿಯೂ ವಾಸವಾಗಿ ರುವ ಯೆಹೂದ್ಯರು ಅಡಾರ್‌ ತಿಂಗಳ ಹದಿನಾಲ್ಕನೇ ದಿವಸವನ್ನು ಸಂತೋಷದ ದಿವಸವಾಗಿಯೂ ಹಬ್ಬದ ದಿವಸವಾಗಿಯೂ ಸುದಿನವಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸವಾಗಿಯೂ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುನಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿವಸವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನಭಾಗಗಳನ್ನು ಕಳುಹಿಸುತ್ತಾರೆ.
Kannada Bible (KNCL) BSI 2016
ಈ ಕಾರಣದಿಂದಾಗಿ ಬಯಲುಪ್ರದೇಶದ ಗ್ರಾಮನಿವಾಸಿ ಯೆಹೂದ್ಯರು ಹದಿನಾಲ್ಕನೇ ದಿನವನ್ನು ಶುಭದಿನವೆಂತಲೂ ನಗರವಾಸಿ ಯೆಹೂದ್ಯರು ಹದಿನೈದನೆಯ ದಿನವನ್ನು ಶುಭದಿನವೆಂತಲೂ ಆಚರಿಸಿ, ಉತ್ಸವ ಭೋಜನಮಾಡಿ, ಒಬ್ಬರಿಗೊಬ್ಬರು ತಿಂಡಿತೀರ್ಥಗಳನ್ನು ವಿನಿಮಯಿಸಿಕೊಳ್ಳುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಗ್ರಾಮಗಳಲ್ಲಿಯೂ ಬಯಲು ಪ್ರಾಂತಗಳ ಪಟ್ಟಣಗಳಲ್ಲಿಯೂ ವಾಸವಾಗಿರುವ ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆಯ ದಿನವನ್ನು ಶುಭದಿನವಾಗಿಯೂ, ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ ಆಚರಿಸಿದರು.