Esther 9:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಅಹಷ್ವೇರೋಷನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮನ್ನು ಕೊಲ್ಲಲು ಬರುವ ವೈರಿಗಳನ್ನು ಎದುರಿಸಲು ಒಟ್ಟಾಗಿ ಸೇರಿದರು. ಇವರಿಗೆ ವಿರುದ್ಧವಾಗಿ ಬಿದ್ದು ಹೊಡೆದಾಡಲು ಯಾರಿಗೂ ಧೈರ್ಯಸಾಲಲಿಲ್ಲ. ಯೆಹೂದ್ಯರ ಮೇಲೆ ಜನರಿಗೆ ಭೀತಿ ಉಂಟಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಅರಸನಾದ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಯಸಿದವರಿಗೆ ವಿರುದ್ಧವಾಗಿ ಕೈಯೆತ್ತುವುದಕ್ಕೆ ಸೇರಿಕೊಂಡಾಗ ಯಾರಿಗೂ ಅವರ ಎದುರಿನಲ್ಲಿ ನಿಲ್ಲಲಾಗಲಿಲ್ಲ.
Kannada BSI Bible 2016
ಅದೇ ದಿವಸದಲ್ಲಿ ಯೆಹೂದ್ಯರು ಅರಸನಾದ ಅಹ ಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ಕೈ ಹಾಕಲು ಕೂಡಿಕೊಂಡರು. ಆಗ ಅವರ ಭಯವು ಸಮಸ್ತ ಜನರ ಮೇಲೆ ಬಿದ್ದದ್ದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಅರಸನಾದ ಅಹಷ್ವೇರೋಷನ ಸಮಸ್ತಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿದ್ದ ಯೆಹೂದ್ಯರು ತಮಗೆ ಕೇಡುಬಯಸಿದವರಿಗೆ ವಿರೋಧವಾಗಿ ಕೈಯೆತ್ತುವದಕ್ಕೆ ಕೂಡಿಕೊಂಡಾಗ ಯಾರೂ ಅವರೆದುರಿನಲ್ಲಿ ನಿಲ್ಲಲಿಲ್ಲ.
Kannada Bible (KNCL) BSI 2016
ಆದುದರಿಂದ ಅರಸ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಪ್ರತಿಯೊಂದು ನಗರದಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಗೆದವರಿಗೆ ವಿರುದ್ಧವಾಗಿ ಕೈಯೆತ್ತಲು ಒಟ್ಟಾಗಿ ಸೇರಿದರು. ಎಲ್ಲರಿಗೂ ಅವರ ಭಯ ಇದ್ದುದರಿಂದ ಯಾರೂ ಅವರ ಮುಂದೆ ನಿಲ್ಲಲಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ಯೆಹೂದ್ಯರು ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ದಾಳಿಮಾಡಲು ಒಟ್ಟಾಗಿ ಸೇರಿದರು. ಆಗ ಯೆಹೂದ್ಯರ ಭಯವು ಸಮಸ್ತ ಜನರ ಮೇಲೆ ಇದ್ದುದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.