Esther 9:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರಲ್ಲಿ ಅವನು ಯೆಹೂದ್ಯರೆಲ್ಲರೂ ಪ್ರತೀ ವರ್ಷ ಆದಾರ್ ತಿಂಗಳಿನ ಹದಿನಾಲ್ಕನೇ ಮತ್ತು ಹದಿನೈದನೇ ದಿವಸಗಳನ್ನು ಪೂರಿಮ್ ದಿವಸಗಳನ್ನಾಗಿ ಆಚರಿಸಬೇಕು ಎಂಬದಾಗಿ ಆದೇಶ ನೀಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿವರ್ಷವೂ ಫಾಲ್ಗುಣಮಾಸದ ಹದಿನಾಲ್ಕನೆಯ ಮತ್ತು ಹದಿನೈದನೆಯ ದಿನಗಳನ್ನು ಉತ್ಸವದಿನಗಳನ್ನಾಗಿ ಆಚರಿಸುವುದು ಶಾಶ್ವತನಿಯಮ ಎಂದೆಣಿಸಬೇಕು.
Kannada BSI Bible 2016
ಮೊರ್ದೆಕೈಯು ಈ ವರ್ತಮಾನಗಳನ್ನು ಬರೆದು ಅಹಷ್ವೇರೋಷನ ಸಕಲ ಪ್ರಾಂತ್ಯಗಳಲ್ಲಿ ಸವಿಾಪ ವಾಗಿಯೂ ದೂರವಾಗಿಯೂ ಇರುವ ಸಕಲ ಯೆಹೂ ದ್ಯರಿಗೆ ಪತ್ರಗಳನ್ನು ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿವರುಷವೂ ಫಾಲ್ಗುನಮಾಸದ ಹದಿನಾಲ್ಕನೆಯ ಮತ್ತು ಹದಿನೈದನೆಯ ದಿನಗಳನ್ನು ಉತ್ಸವದಿನಗಳನ್ನಾಗಿ ಆಚರಿಸುವದು ಶಾಶ್ವತನಿಯಮ ಎಂದೆಣಿಸಬೇಕು.
Kannada Bible (KNCL) BSI 2016
‘ಪ್ರತಿವರ್ಷವೂ ಫಾಲ್ಗುಣಮಾಸದ ಹದಿನಾಲ್ಕನೆ ಮತ್ತು ಹದಿನೈದನೆಯ ದಿನಗಳನ್ನು ಹಬ್ಬದ ದಿನಗಳಾಗಿ ಆಚರಿಸುವುದು ಶಾಶ್ವತ ನಿಯಮ ಎಂದು ಭಾವಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆ ಮತ್ತು ಹದಿನೈದನೆ ದಿನಗಳನ್ನೂ ಪ್ರತಿವರ್ಷ ಹಬ್ಬದ ದಿನಗಳಾಗಿ ಆಚರಿಸುವುದು ಶಾಶ್ವತ ನಿಯಮವೆಂದು ಭಾವಿಸುವಂತೆ ಆ ಪತ್ರದಲ್ಲಿ ಬರೆಯಲಾಗಿತ್ತು.