Esther 9:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೆಂದರೆ ಆ ದಿವಸದಲ್ಲಿ ಯೆಹೂದ್ಯರು ತಮ್ಮ ಶತ್ರುಗಳನ್ನು ಸದೆಬಡಿದರು. ಆ ದಿವಸದಲ್ಲಿ ಅವರಿಗೆ ಶೋಕದ ಬದಲಾಗಿ ಸಂತಸವು ಒದಗಿಬಂತು. ಮತ್ತು ಆ ದಿವಸದಲ್ಲಿ ಅವರ ರೋಧನವು ಹರ್ಷಧ್ವನಿಯಾಗಿ ಮಾರ್ಪಟ್ಟಿತು. ಮೊರ್ದೆಕೈಯು ಎಲ್ಲಾ ಯೆಹೂದ್ಯರಿಗೆ ಪತ್ರ ಬರೆಯಿಸಿದನು. ಆ ದಿವಸದಲ್ಲಿ ಹಬ್ಬವನ್ನು ಆಚರಿಸಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಡಬೇಕು ಎಂಬುದಾಗಿ ಬರೆಯಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.
Kannada BSI Bible 2016
ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿಯುಂಟಾಯಿತು; ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂತು. ಆದದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನಭಾಗಗಳನ್ನು ಕಳುಹಿಸಿ ಬಡವರಿಗೆ ದಾನಧರ್ಮಮಾಡಬೇಕು.
Kannada Bible (KNCL) BSI 2016
ಆ ದಿಗಳಲ್ಲಿ ಯೆಹೂದ್ಯರಿಗೆ ಶತ್ರುಗಳ ಕಾಟ ತಪ್ಪಿ ವಿಶ್ರಾಂತಿ ದೊರೆಯಿತು. ಆ ತಿಂಗಳಿನಲ್ಲಿ ಸಂಕಟವು ಪರಿಹಾರವಾಗಿ ಸಂತೋಷ ಪ್ರಾಪ್ತಿಯಾಯಿತು; ದುಃಖವು ಕಳೆದು ಸುಖಕಾಲ ಬಂದಿತು. ಆದ್ದರಿಂದ ಆ ದಿನಗಳಲ್ಲಿ ಹಬ್ಬದ ಭೋಜನಮಾಡಿ ಪರಸ್ಪರ ತಿಂಡಿತೀರ್ಥಗಳನ್ನು ವಿನಿಮಯಮಾಡಿಕೊಳ್ಳಬೇಕು. ಹಾಗೂ ಬಡಬಗ್ಗರಿಗೆ ದಾನಧರ್ಮ ಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆದ ಕಾಲವಾಗಿಯೂ, ಅವರ ದುಃಖ ಸಂತೋಷವೂ, ಗೋಳಾಟ ಉತ್ಸವವೂ ಬದಲಾದ ದಿನವಾಗಿಯೂ ಕೊಂಡಾಡುವಂತೆ ಆ ಪತ್ರದಲ್ಲಿ ಬರೆದಿತ್ತು. ಆದ್ದರಿಂದ ಆ ದಿನ ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ, ಬಡವರಿಗೆ ದಾನಗಳನ್ನು ಮಾಡುವ ದಿನವಾಗಿಯೂ ಪಾಲಿಸಬೇಕೆಂದೂ ಆ ಪತ್ರದಲ್ಲಿ ಬರೆದಿತ್ತು.