Esther 9:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಾಮಾನನ ಕುತಂತ್ರವನ್ನು ಎಸ್ತೇರ್ ರಾಣಿಯು ರಾಜನ ಸಂಗಡ ಮಾತಾಡುವುದರ ಮೂಲಕ ನಿರರ್ಥಕಗೊಳಿಸಿ ಅವನಿಗೂ ಅವನ ಕುಟುಂಬಕ್ಕೂ ಮರಣವಾಗುವಂತೆ ಮಾಡಿದಳು. ಹಾಮಾನನೂ ಅವನ ಗಂಡುಮಕ್ಕಳೂ ಗಲ್ಲಿಗೇರಿಸಲ್ಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.
Kannada BSI Bible 2016
ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
Kannada BSI JV (ಕನ್ನಡ ಸತ್ಯವೇದವು J.V. (BSI))
(ಇದು ಅರಸನ ಮುಂದೆ ಬಂದಾಗ ಅವನು - ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕೆಂದು ಅಪ್ಪಣೆ ಮಾಡಿದನಷ್ಟೆ.)
Kannada Bible (KNCL) BSI 2016
ಈ ವಿಷಯ ಅರಸನ ಕಿವಿಗೆ ಬಿದ್ದಾಗ, ಅವನು, ‘ಹಾಮಾನನು ಯೆಹೂದ್ಯರ ವಿರುದ್ಧ ಯೋಚಿಸಿದ ಕೇಡು ಅವನ ತಲೆಯ ಮೇಲೆಯೇ ಬರಲಿ. ಅವನನ್ನು ಅವನ ಮಕ್ಕಳನ್ನೂ ಗಲ್ಲಿಗೇರಿಸಿರಿ,’ ಎಂದು ಅಪ್ಪಣೆಮಾಡಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈ ಒಳಸಂಚು ಅರಸನಿಗೆ ತಿಳಿದುಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವಂತೆ ಅರಸನು ಆಜ್ಞೆಯನ್ನು ಹೊರಡಿಸಿದನು. ಅದರೊಂದಿಗೆ ಅವನ ಮಕ್ಕಳನ್ನೂ ಗಲ್ಲಿಗೇರಿಸಲು ಅರಸನು ಆಜ್ಞಾಪಿಸಿದ್ದನು;