Esther 9:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಾಗೆ, ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಮತ್ತು ಯೆಹೂದಿಯಾದ ಮೊರ್ದೆಕೈಯು ಈ ಪೂರಿಮ್ ಹಬ್ಬದ ಬಗ್ಗೆ ಒಂದು ಅಧಿಕೃತ ಪತ್ರವನ್ನು ಬರೆಯಿಸಿದರು. ಜನರು ಅವರ ಎರಡನೆಯ ಪತ್ರವನ್ನು ಸತ್ಯವೆಂದು ನಂಬುವ ಹಾಗೆ ರಾಜಮುದ್ರೆಯೊಂದಿಗೆ ಕಳುಹಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಅಧಿಕಾರಯುಕ್ತಳಾಗಿ ಪೂರೀಮ್ ಸಂಬಂಧವಾದ ಆ ಎರಡನೆಯ ಶಾಸನವನ್ನು ದೃಢಪಡಿಸುವುದಕ್ಕೋಸ್ಕರ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಪತ್ರಗಳನ್ನು ಬರೆದಳು.
Kannada BSI Bible 2016
ಆಗ ಅಬೀಹೈಲನ ಮಗಳಾದ ಎಸ್ತೇರ ರಾಣಿಯೂ ಯೆಹೂದ್ಯನಾದ ಮೊರ್ದೆಕೈಯೂ ಈ ಪೂರೀಮೆಂಬ ದಿವಸಗಳನ್ನು ಕುರಿತು ಎರಡನೇ ಪತ್ರವನ್ನು ಸ್ಥಿರಪಡಿ ಸಲು ಸಮಸ್ತ ಅಧಿಕಾರದಿಂದ ಬರೆಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್‍ರಾಣಿಯು ಅಧಿಕಾರಯುಕ್ತಳಾಗಿ ಪೂರೀಮ್ ಸಂಬಂಧವಾದ ಆ ಎರಡನೆಯ ಶಾಸನವನ್ನು ದೃಢಪಡಿಸುವದಕ್ಕೋಸ್ಕರ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಪತ್ರಗಳನ್ನು ಬರೆದಳು.
Kannada Bible (KNCL) BSI 2016
ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಪೂರಿಮ್ ಹಬ್ಬದ ಆಚರಣೆಗೆ ಸಂಬಂಧಪಟ್ಟ ಆ ಎರಡನೇ ಶಾಸನವನ್ನು ದೃಢಪಡಿಸುವುದಕ್ಕಾಗಿ ಮೊರ್ದೆಕೈಯ ಸಹಾಯವನ್ನು ಪಡೆದು ಅಧಿಕೃತ ಪತ್ರಗಳನ್ನು ಬರೆದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯೂ, ಈ ಪೂರಿಮ್ ದಿನವನ್ನು ಸ್ಥಿರಪಡಿಸುವುದಕ್ಕಾಗಿ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಎರಡನೆಯ ಪತ್ರವನ್ನು ಪೂರ್ಣ ಅಧಿಕಾರದಿಂದ ಬರೆದಳು.