Esther 9:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲದೆ ಸಂಸ್ಥಾನಗಳಲ್ಲಿದ್ದ ಅಧಿಕಾರಿಗಳು, ರಾಜ್ಯಪಾಲರು, ಆಡಳಿತಾಧಿಕಾರಿಗಳು ಯೆಹೂದ್ಯರಿಗೆ ನೆರವಾದರು. ಯಾಕೆಂದರೆ ಅವರು ಮೊರ್ದೆಕೈಗೆ ಹೆದರುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಂದ ಎಲ್ಲಾ ಜನಾಂಗದವರಿಗೆ ಭಯವುಂಟಾಯಿತು; ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಪ್ರಾಬಲ್ಯವು ಹೆಚ್ಚಾಗುತ್ತಾ ಬಂದ ಹಾಗೆಲ್ಲಾ, ಅವನ ಸುದ್ದಿಯೂ ಸಕಲ ಸಂಸ್ಥಾನಗಳಲ್ಲಿಯೂ ಹಬ್ಬಿತು.
Kannada BSI Bible 2016
ಇದಲ್ಲದೆ ಪ್ರಾಂತ್ಯಗಳ ಅಧಿಕಾರಿಗಳೂ ಪ್ರತಿನಿಧಿಗಳೂ ಅಧಿಪತಿ ಗಳೂ ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಯಾಕಂದರೆ ಮೊರ್ದೆ ಕೈಯ ಭಯ ಅವರಿಗೆ ಇದ್ದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಿಂದ ಎಲ್ಲಾ ಜನಾಂಗದವರಿಗೆ ಭಯವುಂಟಾಗಿತ್ತು; ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಪ್ರಾಬಲ್ಯವು ಹೆಚ್ಚಾಗುತ್ತಾ ಬಂದಹಾಗೆಲ್ಲಾ ಅವನ ಸುದ್ದಿಯೂ ಸಕಲ ಸಂಸ್ಥಾನಗಳಲ್ಲಿಯೂ ಹಬ್ಬಿದ್ದರಿಂದ
Kannada Bible (KNCL) BSI 2016
ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಅಧಿಕಾರ ಪ್ರಬಲವಾಗುತ್ತಾ ಬಂದುದರಿಂದ ಅವನ ಕೀರ್ತಿ ಎಲ್ಲಾ ಸಂಸ್ಥಾನಗಳಲ್ಲಿಯೂ ಹಬ್ಬಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಪ್ರಾಂತಗಳ ಉಪರಾಜರೂ, ಪ್ರತಿನಿಧಿಗಳೂ, ಅಧಿಪತಿಗಳೂ, ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಏಕೆಂದರೆ ಮೊರ್ದೆಕೈಯ ಭಯ ಅವರಿಗಿತ್ತು.