Esther 9:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೊರ್ದೆಕೈ ಅರಮನೆಯಲ್ಲಿ ಅತ್ಯಂತ ಪ್ರಭಾವಶಾಲಿಯಾಗಿದ್ದನು. ಸಂಸ್ಥಾನಗಳಲ್ಲಿರುವವರೆಲ್ಲರೂ ಅವನ ಪ್ರಖ್ಯಾತಿಯ ಬಗ್ಗೆ ಕೇಳಿದ್ದರು. ದಿನೇದಿನೇ ಮೊರ್ದೆಕೈ ಬಲಶಾಲಿಯಾಗುತ್ತಾ ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸರ್ವ ಸಂಸ್ಥಾನಾಧಿಕಾರಿಗಳೂ, ಉಪರಾಜರೂ, ದೇಶಾಧಿಪತಿಗಳೂ ಮತ್ತು ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು.
Kannada BSI Bible 2016
ಮೊರ್ದೆಕೈ ಅರಮನೆಯಲ್ಲಿ ದೊಡ್ಡವನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತ್ಯಗಳ ಮೇಲೆ ವ್ಯಾಪಿಸಿತು. ಈ ಮೊರ್ದೆಕೈ ಅಧಿಕಾಧಿಕವಾಗಿ ದೊಡ್ಡವನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸರ್ವಸಂಸ್ಥಾನಾಧಿಕಾರಿಗಳೂ ಉಪರಾಜರೂ ದೇಶಾಧಿಪತಿಗಳೂ ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು.
Kannada Bible (KNCL) BSI 2016
ಆದುದರಿಂದ ಸಕಲ ಸಂಸ್ಥಾನಾಧಿಕಾರಿಗಳೂ ಉಪರಾಜರೂ ದೇಶಾಧಿಪತಿಗಳೂ ಮತ್ತು ಇತರ ರಾಜಸೇವಕರೂ ಅವನಿಗೆ ಭಯಪಟ್ಟು ಯೆಹೂದ್ಯರಿಗೆ ನೆರವಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಮೊರ್ದೆಕೈ ಅರಮನೆಯಲ್ಲಿ ಪ್ರಮುಖನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತಗಳಿಗೂ ಹರಡಿತು. ಈ ಮೊರ್ದೆಕೈ ಅಧಿಕವಾಗಿ ಅಧಿಕಾರವಂತನಾದನು.