Esther 9:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಮ್ಮ ಶತ್ರುಗಳನ್ನೆಲ್ಲಾ ಯೆಹೂದ್ಯರು ಸೋಲಿಸಿ ತಮ್ಮ ಖಡ್ಗಗಳಿಂದ ನಾಶಮಾಡಿದರು; ತಮ್ಮನ್ನು ದ್ವೇಷಿಸುತ್ತಿದ್ದವರನ್ನು ತಮಗಿಷ್ಟ ಬಂದಂತೆ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ, ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ವೈರಿಗಳನ್ನು ಇಷ್ಟವಿದ್ದಂತೆ ಮಾಡಿದರು.
Kannada BSI Bible 2016
ಹೀಗೆಯೇ ಯೆಹೂದ್ಯರು ಕತ್ತೀ ಹೊಡೆತದಿಂದಲೂ ಕೊಲೆಯಿಂದಲೂ ನಾಶದಿಂದಲೂ ತಮ್ಮ ಶತ್ರುಗಳೆಲ್ಲರನ್ನು ಹೊಡೆದು ತಮ್ಮನ್ನು ಹಗೆಮಾಡುವವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ಹಗೆಗಳನ್ನು ಇಷ್ಟವಿದ್ದಂತೆ ಮಾಡಿದರು.
Kannada Bible (KNCL) BSI 2016
ಹೀಗಾಗಿ ಯೆಹೂದ್ಯರು ತಮ್ಮ ವೈರಿಗಳನ್ನೆಲ್ಲಾ ಸೋಲಿಸಿ, ಕತ್ತಿಯಿಂದ ಇರಿದು ಕೊಂದು, ನಿರ್ನಾಮಗೊಳಿಸಿದರು. ತಮ್ಮನ್ನು ಹಗೆಮಾಡುತ್ತಿದ್ದ ಶತ್ರುಗಳಿಗೆ ತಮ್ಮ ಇಷ್ಟಾನುಸಾರ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಯೆಹೂದ್ಯರು ತಮ್ಮ ಶತ್ರುಗಳೆಲ್ಲರನ್ನು ಸೋಲಿಸಿ, ಖಡ್ಗದಿಂದ ಸಂಹರಿಸಿದರು. ತಮ್ಮನ್ನು ಹಗೆಮಾಡುತ್ತಿದ್ದವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.