Exodus 1:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯುದ್ಧವೇನಾದರೂ ಸಂಭವಿಸಿದರೆ, ಇಸ್ರೇಲರು ನಮ್ಮ ವೈರಿಗಳೊಡನೆ ಸೇರಿಕೊಂಡು ನಮ್ಮನ್ನು ಸೋಲಿಸಿ ನಮ್ಮಿಂದ ತಪ್ಪಿಸಿಕೊಳ್ಳಬಹುದು. ಆದ್ದರಿಂದ ಅವರು ಅಭಿವೃದ್ಧಿಯಾಗದಂತೆ ನಾವು ಉಪಾಯವನ್ನು ಮಾಡೋಣ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ” ಎಂದು ಹೇಳಿ
Kannada BSI Bible 2016
ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ದೇಶವನ್ನು ಬಿಟ್ಟುಹೋದಾರು. ಅವರು ವೃದ್ಧಿಯಾಗದಂತೆ ನಾವು ಉಪಾಯ ಮಾಡೋಣ ಎಂದು ಹೇಳಿದನು.
Kannada Bible (KNCL) BSI 2016
ಯುದ್ಧವೇನಾದರು ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ನಾಡನ್ನು ಬಿಟ್ಟು ಪಲಾಯನ ಗೈಯಬಹುದು. ಆದ್ದರಿಂದ ಅವರು ವೃದ್ಧಿಯಾಗದಂತೆ ನಾವು ಉಪಾಯ ಹೂಡಬೇಕು,” ಎಂದು ಎಚ್ಚರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು, ನಮಗೆ ವಿರೋಧವಾಗಿ ಯುದ್ಧಮಾಡಿ, ದೇಶವನ್ನು ಬಿಟ್ಟು ಹೋಗಬಹುದು ಆದ್ದರಿಂದ ಅವರು ವೃದ್ಧಿಯಾಗದಂತೆ ಅವರೊಂದಿಗೆ ಬುದ್ಧಿವಂತಿಕೆಯಿಂದ ನಾವು ವರ್ತಿಸೋಣ,” ಎಂದನು.