Exodus 1:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟೀಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಈ ಅಧಿಕಾರಿಗಳು ರಾಜನಿಗಾಗಿ ಪಿತೋಮ್ ಮತ್ತು ರಾಮ್ಸೇಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು ಶೇಖರಿಸುವುದಕ್ಕೆ ರಾಜನು ಈ ಪಟ್ಟಣಗಳನ್ನು ಉಪಯೋಗಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.
Kannada BSI Bible 2016
ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಅವನ ಜನರು ಇಸ್ರಾಯೇಲ್ಯರನ್ನು ಬಿಟ್ಟೀಕೆಲಸದಿಂದ ಉಪದ್ರವಪಡಿಸುವದಕ್ಕಾಗಿ ಬಿಟ್ಟೀಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇಟ್ಟು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
Kannada Bible (KNCL) BSI 2016
ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ ‘ಪಿತೋಮ್’ ಮತ್ತು ‘ರಾಮ್ಸೇಸ್’ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರನ್ನು ಬಿಟ್ಟೀ ಕೆಲಸಗಳಿಂದ ಶ್ರಮಪಡಿಸುವುದಕ್ಕಾಗಿ, ಬಿಟ್ಟೀ ಕೆಲಸಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ಮತ್ತು ರಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.