Exodus 1:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟಿನವರು ಇಸ್ರೇಲರಿಂದ ಪ್ರಯಾಸಕರವಾದ ಕೆಲಸಗಳನ್ನು ಬಲವಂತವಾಗಿ ಮಾಡಿಸಿದಷ್ಟೂ ಇಸ್ರೇಲರು ಹೆಚ್ಚು ಹರಡಿಕೊಂಡದ್ದರಿಂದ ಈಜಿಪ್ಟಿನ ಜನರು ಇಸ್ರೇಲರಿಗೆ ಹೆಚ್ಚೆಚ್ಚಾಗಿ ಭಯಪಟ್ಚರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತರು ಇಸ್ರಾಯೇಲರನ್ನು ಉಪದ್ರವಪಡಿಸಿದಷ್ಟೂ, ಅವರು ಬಹಳವಾಗಿ ಹೆಚ್ಚಿ ಹರಡಿಕೊಂಡಿದ್ದರಿಂದ ಐಗುಪ್ತರು ಇಸ್ರಾಯೇಲರ ವಿಷಯದಲ್ಲಿ ಬಹಳ ಹೆದರಿಕೆಯುಳ್ಳವರಾದರು.
Kannada BSI Bible 2016
ಆದರೆ ಇವರು ಅವರನ್ನು ಎಷ್ಟು ಶ್ರಮೆಪಡಿಸಿದರೋ ಅಷ್ಟು ಅಧಿಕ ವಾಗಿ ಅವರು ಹೆಚ್ಚಿ ಹರಡಿಕೊಂಡರು. ಐಗುಪ್ತ್ಯರು ಇಸ್ರಾಯೇಲ್‌ ಮಕ್ಕಳಿಗಾಗಿ ಸಂತಾಪಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತ್ಯರು ಅವರನ್ನು ಎಷ್ಟು ಉಪದ್ರವಪಡಿಸಿದರೂ ಅವರು ಅತ್ಯಧಿಕವಾಗಿ ಹೆಚ್ಚಿ ಹರಡಿಕೊಂಡದ್ದರಿಂದ ಐಗುಪ್ತ್ಯರು ಇಸ್ರಾಯೇಲ್ಯರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾದರು.
Kannada Bible (KNCL) BSI 2016
ಈಜಿಪ್ಟರು ಅವರಿಗೆ ಎಷ್ಟು ಕಿರುಕುಳ ಕೊಡುತ್ತಿದ್ದರೋ ಅಷ್ಟೂ ಹೆಚ್ಚಿ ಹರಡಿಕೊಳ್ಳುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈಜಿಪ್ಟನವರು ಅವರನ್ನು ಎಷ್ಟು ಶ್ರಮಪಡಿಸಿದರೋ, ಅಷ್ಟು ಅಧಿಕವಾಗಿ ಅವರು ಹೆಚ್ಚಿ ಹರಡಿಕೊಂಡದ್ದರಿಂದ ಈಜಿಪ್ಟಿನವರು ಇಸ್ರಾಯೇಲರ ಬಗ್ಗೆ ಹೆದರಿದವರಾದರು.