Exodus 1:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಬ್ರಿಯ ಸ್ತ್ರೀಯರಿಗೆ ನೀವು ಹೆರಿಗೆ ಮಾಡುವಾಗ ಹೆಣ್ಣುಮಗು ಹುಟ್ಟಿದರೆ, ಅದನ್ನು ಉಳಿಸಿರಿ; ಗಂಡುಮಗು ಹುಟ್ಟಿದರೆ ಸಾಯಿಸಿರಿ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವರಿಗೆ, “ನೀವು ಇಬ್ರಿಯ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗುವು ಗಂಡು ಮಗುವಾಗಿದ್ದರೆ ಕೊಂದುಹಾಕಿರಿ, ಹೆಣ್ಣಾಗಿದ್ದರೆ ಬದುಕಲು ಬಿಡಿ” ಎಂದು ಹೇಳಿದನು.
Kannada BSI Bible 2016
ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಿಗೆ - ನೀವು ಇಬ್ರಿಯರ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವದು ಗಂಡುಮಗುವಾಗಿದ್ದರೆ ಕೊಲ್ಲಬೇಕು, ಹೆಣ್ಣಾಗಿದ್ದರೆ ಉಳಿಸಬೇಕು ಎಂದು ಹೇಳಿದನು.
Kannada Bible (KNCL) BSI 2016
“ನೀವು ಹಿಬ್ರಿಯ ಮಹಿಳೆಯರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗು ಗಂಡಾಗಿದ್ದರೆ ಕೊಲ್ಲಬೇಕು, ಹೆಣ್ಣಾಗಿದ್ದರೆ ಉಳಿಸಬೇಕು,” ಎಂದು ಹೇಳಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ, “ನೀವು ಹಿಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವುದಕ್ಕೆ ಹೆರಿಗೆಯ ಸಮಯದಲ್ಲಿ ಅವರನ್ನು ಪರಾಂಬರಿಸುವಾಗ, ಗಂಡು ಮಗುವಾದರೆ ಅದನ್ನು ಕೊಂದುಹಾಕಿರಿ, ಹೆಣ್ಣಾದರೆ ಬದುಕಲಿ,” ಎಂದು ಹೇಳಿದ್ದನು.