Exodus 1:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆ ದಾದಿಯರಿಗೆ ದೇವರಲ್ಲಿ ಭಯಭಕ್ತಿ ಇದ್ದಕಾರಣ ಅವರು ರಾಜನ ಆಜ್ಞೆಗೆ ವಿಧೇಯರಾಗದೆ ಗಂಡುಮಕ್ಕಳನ್ನೂ ಉಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು.
Kannada BSI Bible 2016
ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಸೂಲಗಿತ್ತಿಯರು ದೇವರಿಗೆ ಭಯಪಡುವವರಾದದರಿಂದ ಐಗುಪ್ತ್ಯರ ಅರಸನ ಮಾತಿನಂತೆ ಮಾಡದೆ ಗಂಡುಮಕ್ಕಳನ್ನೂ ಉಳಿಸಿದರು.
Kannada Bible (KNCL) BSI 2016
ಆದರೆ ಆ ಸೂಲಗಿತ್ತಿಯರು ದೈವಭಕ್ತರು. ಈಜಿಪ್ಟಿನ ಅರಸ ಹೇಳಿದಂತೆ ಮಾಡದೆ ಗಂಡುಮಕ್ಕಳನ್ನು ಉಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಈಜಿಪ್ಟಿನ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.