Exodus 10:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹೋಗು. ನಾನು ಅದ್ಭುತಕಾರ್ಯಗಳನ್ನು ತೋರಿಸಲು ಅವಕಾಶವಾಗಲೆಂದು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹಿಂತಿರುಗಿ ಹೋಗು. ನಾನು ಫರೋಹನ ಮತ್ತು ಅವನ ಪರಿವಾರದವರ ಹೃದಯಗಳನ್ನು ಕಠಿಣಗೊಳಿಸಿದ್ದೇನೆ. ಏಕೆಂದರೆ ನಾನು ಈ ಮಹತ್ಕಾರ್ಯಗಳನ್ನು ಅವರ ಮುಂದೆ ನಡೆಸುವುದಕ್ಕೆ ಇದು ಕಾರಣವಾಯಿತು.
Kannada BSI Bible 2016
ತರುವಾಯ ಕರ್ತನು ಮೋಶೆಗೆ-- ಫರೋಹನ ಬಳಿಗೆ ಹೋಗು. ನಾನು ನನ್ನ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸು ವದಕ್ಕಾಗಿ ಅವನ ಹೃದಯವನ್ನೂ ಅವನ ಸೇವಕರ ಹೃದಯಗಳನ್ನೂ ಕಠಿಣಮಾಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಯೆಹೋವನು ಮೋಶೆಗೆ ಇಂತೆಂದನು - ಫರೋಹನ ಬಳಿಗೆ ತಿರಿಗಿ ಹೋಗು. ನಾನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ಈ ಮಹತ್ಕಾರ್ಯಗಳನ್ನು ನಡಿಸುವದಕ್ಕೆ ಆಸ್ಪದವಾಗುವದಕ್ಕೂ
Kannada Bible (KNCL) BSI 2016
ಬಳಿಕ ಸರ್ವೇಶ್ವರ ಸ್ವಾಮಿ ಮೋಶೆಗೆ: “ಫರೋಹನ ಬಳಿಗೆ ಮತ್ತೆ ಹೋಗು. ನಾನು ಅವನ ಮತ್ತು ಅವನ ಪರಿವಾರದವರ ಹೃದಯಗಳನ್ನು ಮೊಂಡಾಗಿಸಿದ್ದೇನೆ. ಏಕೆಂದರೆ ಈ ಸೂಚಕಕಾರ್ಯಗಳನ್ನು ಅವರ ಮುಂದೆ ನಡೆಸಲು ಆಸ್ಪದವಾಗಬೇಕು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೆಹೋವ ದೇವರು ಮೋಶೆಗೆ, “ಫರೋಹನ ಬಳಿಗೆ ಹೋಗು, ಏಕೆಂದರೆ ನಾನು ನನ್ನ ಅದ್ಭುತ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸುವುದಕ್ಕಾಗಿ ಅವನ ಹೃದಯವನ್ನೂ ಅವನ ಅಧಿಕಾರಿಗಳ ಹೃದಯಗಳನ್ನೂ ಕಠಿಣ ಮಾಡಿದ್ದೇನೆ.