Exodus 10:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ನಿನ್ನ ಕೈಯನ್ನೆತ್ತು. ಆಗ ಪ್ರಿಯತಮತೆಗಳು ಬರುವವು! ಪ್ರಿಯತಮತೆಗಳು ಈಜಿಪ್ಟ್ ದೇಶದಲ್ಲೆಲ್ಲಾ ಹರಡಿಕೊಳ್ಳುವವು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದುಕೊಂಡ ಪೈರುಗಳನ್ನೆಲ್ಲಾ ಪ್ರಿಯತಮತೆಗಳು ತಿಂದುಬಿಡುವವು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಮೋಶೆಗೆ, “ಐಗುಪ್ತ ದೇಶದ ಮೇಲೆ ನಿನ್ನ ಕೈಯನ್ನು ಚಾಚಿ, ಮಿಡತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ” ಎಂದು ಹೇಳಿದನು.
Kannada BSI Bible 2016
ಆಗ ಕರ್ತನು ಮೋಶೆಗೆ--ಮಿಡತೆಗಳಿಗಾಗಿ ನಿನ್ನ ಕೈಯನ್ನು ಐಗುಪ್ತದ ಮೇಲೆ ಚಾಚು. ಅವು ಐಗುಪ್ತದ ಮೇಲೆ ಬಂದು ಆ ದೇಶದಲ್ಲಿರುವ ಹಸುರಾದದ್ದನ್ನೆಲ್ಲಾ ಅಂದರೆ ಆನೆಕಲ್ಲಿನ ಮಳೆಯು ಉಳಿಸಿದ್ದದನ್ನೆಲ್ಲಾ ತಿಂದು ಬಿಡಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಮೋಶೆಗೆ - ಐಗುಪ್ತದೇಶದ ಮೇಲೆ ನಿನ್ನ ಕೈಚಾಚಿ ವಿುಡಿತೆಗಳನ್ನು ಬರಮಾಡು; ಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವ ಪೈರುಗಳನ್ನೆಲ್ಲಾ ವಿುಡಿತೆಗಳು ತಿಂದುಬಿಡಲಿ ಎಂದು ಹೇಳಿದನು.
Kannada Bible (KNCL) BSI 2016
ಸರ್ವೇಶ್ವರ ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ಕೈಚಾಚಿ ಮಿಡಿತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶ ಆಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಮೋಶೆಗೆ, “ಮಿಡತೆಗಳಿಗಾಗಿ ನಿನ್ನ ಕೈಯನ್ನು ಈಜಿಪ್ಟಿನ ಮೇಲೆ ಚಾಚು. ಅವು ಈಜಿಪ್ಟಿನ ಮೇಲೆ ಬಂದು, ಆಲಿಕಲ್ಲಿನ ಮಳೆಯು ದೇಶದಲ್ಲಿ ಉಳಿಸಿದ ಹಸುರಾದದ್ದನ್ನೆಲ್ಲಾ ತಿಂದುಬಿಡಲಿ,” ಎಂದರು.