Exodus 10:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂತೆಯೇ ಮೋಶೆ ಈಜಿಪ್ಟ್ ದೇಶದ ಮೇಲೆ ಕೈ ಚಾಚಿದನು. ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. ಗಾಳಿಯು ಹಗಲಿರುಳು ಬೀಸಿತು. ಮುಂಜಾನೆಯಾದಾಗ ಆ ಗಾಳಿಯಿಂದ ಈಜಿಪ್ಟ್ ದೇಶಕ್ಕೆ ಪ್ರಿಯತಮತೆಗಳು ಬಂದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ತನ್ನ ಕೋಲನ್ನು ಐಗುಪ್ತ ದೇಶದ ಮೇಲೆ ಚಾಚಿದಾಗ, ಯೆಹೋವನು ಹಗಲಿರುಳು ಮೂಡಣದಿಕ್ಕಿನಿಂದ ಗಾಳಿಯನ್ನು ಬೀಸುವಂತೆ ಮಾಡಿದನು. ಹೊತ್ತಾರೆ ಗಾಳಿಯ ದೆಸೆಯಿಂದ ಮಿಡತೆಗಳು ಬಂದಿದ್ದವು.
Kannada BSI Bible 2016
ಮೋಶೆಯು ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಕರ್ತನು ಹಗಲಿರುಳೂ ಮೂಡಣಗಾಳಿಯನ್ನು ಬರಮಾಡಿದನು. ಉದ ಯವಾದಾಗ ಆ ಮೂಡಣ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಯೆಹೋವನು ಆ ಹಗಲಿರುಳು ಮೂಡಣದಿಕ್ಕಿನಿಂದ ಗಾಳಿಯನ್ನು ಬೀಸಮಾಡಿದನು. ಹೊತ್ತಾರೆ ಆ ಗಾಳಿಯ ದೆಸೆಯಿಂದ ವಿುಡಿತೆಗಳು ಬಂದಿದ್ದವು.
Kannada Bible (KNCL) BSI 2016
ಅಂತೆಯೇ ಮೋಶೆ ತನ್ನ ಕೋಲನ್ನು ಈಜಿಪ್ಟ್ ದೇಶದ ಮೇಲೆ ಚಾಚಿದನು. ಸರ್ವೇಶ್ವರ ಹಗಲಿರುಳು ಪೂರ್ವದಿಕ್ಕಿನಿಂದ ಗಾಳಿ ಬೀಸುವಂತೆ ಮಾಡಿದರು. ಆ ಗಾಳಿಯಿಂದಾಗಿ ಮುಂಜಾನೆಯಲ್ಲೇ ಮಿಡತೆಗಳು ಬಂದಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ತನ್ನ ಕೋಲನ್ನು ಈಜಿಪ್ಟ್ ದೇಶದ ಮೇಲೆ ಚಾಚಿದಾಗ, ಯೆಹೋವ ದೇವರು ಹಗಲಲ್ಲೂ ರಾತ್ರಿಯಲ್ಲೂ ಪೂರ್ವದಿಕ್ಕಿನಿಂದ ಗಾಳಿಯನ್ನು ಬರಮಾಡಿದರು. ಉದಯವಾದಾಗ ಆ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು.