Exodus 10:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಿಯತಮತೆಗಳು ಈಜಿಪ್ಟ್ ದೇಶದೊಳಗೆ ಹಾರಿಬಂದು ನೆಲದ ಮೇಲೆ ಇಳಿದವು. ಈಜಿಪ್ಟಿನಲ್ಲಿ ಹಿಂದೆಂದೂ ಇಷ್ಟು ಪ್ರಿಯತಮತೆಗಳು ಇರಲಿಲ್ಲ; ಇನ್ನು ಮುಂದೆಯೂ ಇರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದಿಳಿದು ಐಗುಪ್ತ ದೇಶದ ಎಲ್ಲಾ ಕಡೆಯಲ್ಲಿಯೂ ಅಪರಿಮಿತವಾಗಿ ಮುತ್ತಿಕೊಂಡವು. ಅಂಥ ಮಿಡತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರಲು ಸಾಧ್ಯವಿಲ್ಲ.
Kannada BSI Bible 2016
ಹೀಗೆ ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದು ಐಗುಪ್ತದ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವು ಕ್ರೂರ ವಾದವುಗಳಾಗಿದ್ದವು. ಅವುಗಳಂತೆ ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿುಡಿತೆಗಳು ಐಗುಪ್ತದೇಶದಲ್ಲೆಲ್ಲಾ ಬಂದು ಐಗುಪ್ತದೇಶದ ಎಲ್ಲಾ ಕಡೆಯಲ್ಲಿಯೂ ಅಪರಿವಿುತವಾಗಿ ಇಳಿದವು. ಅಂಥ ವಿುಡಿತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರಲಿಕ್ಕಿಲ್ಲ.
Kannada Bible (KNCL) BSI 2016
ಅಪರಿಮಿತ ಸಂಖ್ಯೆಯಲ್ಲಿ ಅವು ಇಡೀ ಈಜಿಪ್ಟ್ ದೇಶದಲ್ಲಿ ಬಂದಿಳಿದು ಅದರ ಎಲ್ಲಾ ಕಡೆಗಳಲ್ಲಿ ಹರಡಿಕೊಂಡವು. ಅಂಥ ಮಿಡಿತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರುವಂತಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಮಿಡತೆಗಳ ಉಪದ್ರವ ಈಜಿಪ್ಟ್ ದೇಶದಲ್ಲೆಲ್ಲಾ ಬಂದು, ಈಜಿಪ್ಟಿನ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವುಗಳಂಥವು ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು.