Exodus 10:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಿಯತಮತೆಗಳು ನೆಲವನ್ನು ಮುಚ್ಚಿಕೊಂಡವು; ಇದರಿಂದಾಗಿ ನೆಲವು ಕಾಣದಂತಾಯಿತು. ಆಲಿಕಲ್ಲಿನ ಮಳೆಗೆ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ ಮರಗಳಲ್ಲಿದ್ದ ಕಾಯಿಗಳನ್ನೂ ಅವು ತಿಂದುಬಿಟ್ಟವು. ಈಜಿಪ್ಟಿನಲ್ಲೆಲ್ಲಾ ಮರಗಳಲ್ಲಾಗಲಿ ಗಿಡಗಳಲ್ಲಾಗಲಿ ಹಸುರಾಗಿದ್ದ ಒಂದಾದರೂ ಉಳಿಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ಭೂಮಿಯನ್ನೆಲ್ಲಾ ಮುಚ್ಚಿಕೊಂಡಿದ್ದರಿಂದ ನೆಲವು ಕಾಣದೇ ಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ, ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ಅವು ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ.
Kannada BSI Bible 2016
ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಭೂವಿುಯನ್ನೆಲ್ಲಾ ಮುಚ್ಚಿಕೊಂಡದ್ದರಿಂದ ನೆಲವು ಕಾಣದೆಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ ಅಡವಿಯ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ.
Kannada Bible (KNCL) BSI 2016
ನೆಲವೆಲ್ಲ ಕರ್ರಗೆ ಕಾಣಿಸುವಷ್ಟು ಅವು ಭೂಮಿಯನ್ನೆಲ್ಲಾ ಆವರಿಸಿಕೊಂಡವು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಪಚ್ಚೆ ಪೈರುಗಳನ್ನೂ ಗಿಡಮರ ಕಾಯಿಗಳನ್ನೂ ತಿಂದುಬಿಟ್ಟವು. ಈಜಿಪ್ಟ್ ದೇಶದಲ್ಲೆಲ್ಲಾ ಹಸುರಾದ ಗಿಡಮರಗಳೊಂದೂ ಉಳಿಯಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವು ಭೂಮಿಯನ್ನೆಲ್ಲಾ ಮುತ್ತಿಕೊಂಡದ್ದರಿಂದ, ಆ ದೇಶದಲ್ಲಿ ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ, ಆಲಿಕಲ್ಲಿನ ಮಳೆಯು ಉಳಿಸಿದ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಈಜಿಪ್ಟ್ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.