Exodus 10:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದೊಂದು ಸಲ ನನ್ನ ಪಾಪಗಳನ್ನು ಕ್ಷಮಿಸಿ ಈ ‘ವಿಪತ್ತನ್ನು’ ನನ್ನಿಂದ ತೊಲಗಿಸಬೇಕೆಂದು ಯೆಹೋವನಿಗೆ ಪ್ರಾರ್ಥಿಸಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಈ ಒಂದೇ ಸಾರಿ ನನ್ನ ಪಾಪಗಳನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರವಾದ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು” ಎಂದನು.
Kannada BSI Bible 2016
ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷವಿುಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು ಅಂದನು.
Kannada Bible (KNCL) BSI 2016
ಈ ಒಂದು ಸಾರಿ ನನ್ನನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ಈ ಮಾರಕ ವಿಪತ್ತನ್ನು ನನ್ನಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು,” ಎಂದು ವಿನಂತಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ಈಗ ಒಂದೇ ಸಾರಿ ಮಾತ್ರ ನನ್ನ ಪಾಪವನ್ನು ಕ್ಷಮಿಸಬೇಕು. ಈ ಮರಣಕರವಾದ ಉಪದ್ರವವನ್ನು ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಿರಿ,” ಎಂದನು.