Exodus 10:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು. ಆಗ ಕಾರ್ಗತ್ತಲೆಯು ಈಜಿಪ್ಟನ್ನು ಆವರಿಸುವುದು. ಆ ಕಾರ್ಗತ್ತಲೆಯಿಂದ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯೆಹೋವನು ಮೋಶೆಗೆ, “ಆಕಾಶಕ್ಕೆ ನಿನ್ನ ಕೈಯನ್ನು ಚಾಚು. ಆಗ ಐಗುಪ್ತ ದೇಶದಲ್ಲೆಲ್ಲಾ ಕತ್ತಲು ಉಂಟಾಗುವುದು. ಆ ಕತ್ತಲೆಯಿಂದಾಗಿ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು.
Kannada BSI Bible 2016
ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಯೆಹೋವನು ಮೋಶೆಗೆ - ಆಕಾಶಕ್ಕೆ ನಿನ್ನ ಕೈ ಚಾಚು; ಆಗ ಐಗುಪ್ತದೇಶದಲ್ಲೆಲ್ಲಾ ಕತ್ತಲುಂಟಾಗುವದು; ಆ ಕತ್ತಲಿನಿಂದ ಜನರು ತಡವರಿಸುತ್ತಾ ನಡೆಯುವರೆಂದು ಹೇಳಿದನು.
Kannada Bible (KNCL) BSI 2016
ಆ ಬಳಿಕ ಸರ್ವೇಶ್ವರ ಮೋಶೆಗೆ, “ಆಕಾಶದತ್ತ ನಿನ್ನ ಕೈಚಾಚು. ಆಗ ಈಜಿಪ್ಟ್ ದೇಶದಲ್ಲೆಲ್ಲಾ ಕತ್ತಲೆಯುಂಟಾಗುವುದು. ಜನರು ತಡವರಿಸಿ ನಡೆಯಬೇಕಾಗುವಷ್ಟು ಕತ್ತಲೆ ಉಂಟಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಮೋಶೆಗೆ, “ಈಜಿಪ್ಟ್ ದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು,” ಎಂದರು.