Exodus 10:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫರೋಹನು ಮತ್ತೆ ಮೋಶೆಯನ್ನು ಕರೆಸಿ, “ಹೋಗಿ, ಯೆಹೋವನನ್ನು ಆರಾಧಿಸಿರಿ! ನೀವು ನಿಮ್ಮ ಮಕ್ಕಳನ್ನು ಕರೆದುಕೊಂಡು ಹೋಗಬಹುದು. ಆದರೆ ನೀವು ನಿಮ್ಮ ಕುರಿಗಳನ್ನು ದನಕರುಗಳನ್ನು ಇಲ್ಲಿಯೇ ಬಿಟ್ಟುಹೋಗಬೇಕು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಫರೋಹನು ಮೋಶೆಯನ್ನು ಕರೆಯಿಸಿ ಅವನಿಗೆ, “ನೀವು ಹೋಗಿ ಯೆಹೋವನಿಗೆ ಆರಾಧನೆ ಮಾಡಿ ಬರಬಹುದು. ನಿಮ್ಮ ಮನೆಗಳಿಗೆ ಸೇರಿದವರೂ ಹೋಗಬಹುದು. ನಿಮ್ಮ ಕುರಿದನಗಳನ್ನು ಮಾತ್ರ ಇಲ್ಲೇ ಬಿಟ್ಟುಹೋಗಬೇಕು” ಎಂದನು.
Kannada BSI Bible 2016
ಆಗ ಫರೋಹನು ಮೋಶೆಯನ್ನು ಕರೆ ಯಿಸಿ ಅವನಿಗೆ--ನೀವು ಹೋಗಿ ಕರ್ತನಿಗೆ ಸೇವೆ ಮಾಡಿರಿ, ನಿಮ್ಮ ಕುರಿದನಗಳು ಮಾತ್ರ ಇಲ್ಲಿರಲಿ. ನಿಮ್ಮ ಮಕ್ಕಳೂ ನಿಮ್ಮ ಸಂಗಡ ಹೋಗಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಫರೋಹನು ಮೋಶೆಯನ್ನು ಕರಸಿ - ನೀವು ಹೋಗಿ ಯೆಹೋವನಿಗೆ ಆರಾಧನೆ ಮಾಡಿ ಬರಬಹುದು; ನಿಮ್ಮ ಮನೆಗಳಿಗೆ ಸೇರಿದವರೂ ಹೋಗಬಹುದು; ನಿಮ್ಮ ಕುರಿದನಗಳನ್ನು ಮಾತ್ರ ಇಲ್ಲೇ ಬಿಟ್ಟುಹೋಗಬೇಕು ಅಂದನು.
Kannada Bible (KNCL) BSI 2016
ಫರೋಹನು ಮೋಶೆಯನ್ನು ಕರೆಯಿಸಿ, “ನೀವು ಹೋಗಿ ಸರ್ವೇಶ್ವರನಿಗೆ ಆರಾಧನೆ ಮಾಡಿಬರಬಹುದು; ನಿಮ್ಮ ಮಡದಿ ಮಕ್ಕಳೂ ಹೋಗಿಬರಬಹುದು; ನಿಮ್ಮ ದನಕುರಿಗಳನ್ನು ಮಾತ್ರ ಇಲ್ಲೇ ಬಿಟ್ಟು ಹೋಗಬೇಕು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಫರೋಹನು ಮೋಶೆಯನ್ನು ಕರೆಯಿಸಿ ಅವನಿಗೆ, “ನೀವು ಹೋಗಿ ಯೆಹೋವ ದೇವರಿಗೆ ಆರಾಧನೆ ಮಾಡಿರಿ. ನಿಮ್ಮ ಕುರಿದನಗಳು ಮಾತ್ರ ಇಲ್ಲಿರಲಿ. ನಿಮ್ಮ ಮಡದಿ ಮಕ್ಕಳೂ ನಿಮ್ಮ ಸಂಗಡ ಹೋಗಲಿ,” ಎಂದನು.