Exodus 10:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಪ್ರಾಣಿಗಳನ್ನೆಲ್ಲಾ ತೆಗೆದುಕೊಂಡು ಹೋಗುವೆವು. ಒಂದನ್ನಾದರೂ ಬಿಟ್ಟುಹೋಗುವುದಿಲ್ಲ; ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ಅಲ್ಲಿಗೆ ಹೋದಾಗಲೇ ನಮಗೆ ತಿಳಿಯುವುದು. ಆದ್ದರಿಂದ, ನಾವು ಇವುಗಳನ್ನೆಲ್ಲಾ ನಮ್ಮ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಎಲ್ಲಾ ಪಶುಗಳನ್ನೂ ಸಹ ನಮ್ಮ ಸಂಗಡ ತೆಗೆದುಕೊಂಡು ಹೋಗುವೆವು. ಒಂದು ಗೊರಸನ್ನಾದರೂ ನಾವು ಬಿಟ್ಟು ಹೋಗುವುದಿಲ್ಲ. ಆ ಪಶುಗಳಿಂದಲೇ ನಮ್ಮ ದೇವರಾದ ಯೆಹೋವನಿಗೆ ಆರಾಧನೆಯನ್ನು ಸಲ್ಲಿಸಬೇಕು. ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ನಾವು ಅಲ್ಲಿಗೆ ಸೇರುವುದಕ್ಕೆ ಮೊದಲು ನಮಗೆ ತಿಳಿಯದು” ಎಂದನು.
Kannada BSI Bible 2016
ನಮ್ಮ ಪಶುಗಳನ್ನೂ ನಾವು ನಮ್ಮ ಸಂಗಡ ತೆಗೆದು ಕೊಂಡು ಹೋಗುವೆವು. ಒಂದು ಗೊರಸೆಯಾದರೂ ಬಿಡುವದಿಲ್ಲ. ಯಾಕಂದರೆ ನಮ್ಮ ದೇವರಾದ ಕರ್ತನಿಗೆ ಆರಾಧನೆ ಮಾಡುವದಕ್ಕೆ ಅವುಗಳಿಂದಲೇ ಆರಿಸ ಬೇಕು. ಕರ್ತನಿಗೆ ಯಾವ ಸೇವೆಮಾಡಬೇಕೆಂಬದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ಗೊರಸೆಯನ್ನಾದರೂ ನಾವು ಬಿಟ್ಟು ಹೋಗುವದಕ್ಕಾಗದು; ಆ ಪಶುಗಳಿಂದಲೇ ನಮ್ಮ ದೇವರಾದ ಯೆಹೋವನಿಗೆ ಯಜ್ಞ ಮಾಡಬೇಕಲ್ಲವೇ; ಯಾವ ಪಶುಗಳನ್ನು ಅರ್ಪಿಸಬೇಕೋ ಅದು ನಾವು ಅಲ್ಲಿಗೆ ಸೇರುವದಕ್ಕೆ ಮುಂಚೆ ನಮಗೆ ತಿಳಿಯದು ಅಂದನು.
Kannada Bible (KNCL) BSI 2016
ಅದು ಮಾತ್ರವಲ್ಲ, ನಮ್ಮ ಎಲ್ಲ ಪಶುಪ್ರಾಣಿಗಳನ್ನೂತೆಗೆದುಕೊಂಡು ಹೋಗಲು ಅಪ್ಪಣೆ ಕೊಡಿ. ಒಂದು ಗೊರಸನ್ನೂ ನಾವು ಬಿಟ್ಟುಹೋಗಲು ಆಗದು. ಈ ಪಶುಪ್ರಾಣಿಗಳಿಂದಲೇ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಬಲಿಯೊಪ್ಪಿಸಬೇಕಾಗಿದೆ ಅಲ್ಲವೆ? ಯಾವ ಯಾವ ಪ್ರಾಣಿಗಳನ್ನು ಅರ್ಪಿಸಬೇಕೋ ಅದು ನಾವು ಅಲ್ಲಿಗೆ ಸೇರುವುದಕ್ಕೆ ಮುಂಚೆ ನಮಗೆ ತಿಳಿಯದು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಪಶುಪ್ರಾಣಿಗಳನ್ನೂ ನಾವು ನಮ್ಮ ಸಂಗಡ ತೆಗೆದುಕೊಂಡು ಹೋಗುವೆವು. ಒಂದು ಗೊರಸನ್ನೂ ಬಿಡಲಾರೆವು. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡುವುದಕ್ಕೆ ಅವುಗಳಿಂದಲೇ ಬಲಿ ಅರ್ಪಿಸಬೇಕು. ಯೆಹೋವ ದೇವರಿಗೆ ಯಾವ ಅರ್ಪಣೆ ಮಾಡಬೇಕೆಂಬುದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯದು,” ಎಂದನು.