Exodus 10:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫರೋಹನು ಮೋಶೆಗೆ, “ಇಲ್ಲಿಂದ ತೊಲಗಿ ಹೋಗು! ನೀನು ನನ್ನ ಸನ್ನಿಧಿಗೆ ಇನ್ನು ಮೇಲೆ ಬರಕೂಡದು. ನೀನು ಮತ್ತೆ ಬಂದರೆ ನಿನಗೆ ಮರಣದಂಡನೆ ವಿಧಿಸುವೆನು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಫರೋಹನು ಮೋಶೆಗೆ, “ನನ್ನನ್ನು ಬಿಟ್ಟುಹೋಗು. ಇನ್ನು ಮುಂದೆ ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು. ಏಕೆಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವೆ” ಎಂದು ಹೇಳಿದನು.
Kannada BSI Bible 2016
ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು.ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಮೋಶೆಗೆ - ನನ್ನ ಬಳಿಯಿಂದ ಹೋಗು; ಇನ್ನು ಮುಂದೆ ನನ್ನ ಮುಖದೆದುರಿಗೆ ಬರಲೇ ಕೂಡದು; ಎಚ್ಚರ; ತಿರಿಗಿ ಸನ್ನಿಧಿಗೆ ಬಂದರೆ ಮರಣದಂಡನೆ ಆಗುವದು ಎಂದು ಹೇಳಿದನು.
Kannada Bible (KNCL) BSI 2016
ಅವನು ಮೋಶೆಗೆ, “ಇಲ್ಲಿಂದ ಹೊರಡು; ಇನ್ನು ಮುಂದೆ ನನ್ನ ಸಮ್ಮುಖಕ್ಕೆ ಬರಲೇ ಬೇಡ, ಎಚ್ಚರಿಕೆ! ತಿರುಗಿ ಬಂದೆಯಾದರೆ ಮರಣದಂಡನೆ ಆಗುವುದು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಫರೋಹನು ಮೋಶೆಗೆ, “ನನ್ನನ್ನು ಬಿಟ್ಟು ಹೋಗು. ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರ. ಏಕೆಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ಸಾಯುವೆ,” ಎಂದನು.